Breaking News

ಶಾಲೆಗಳಿಗೆ ಬೇಸಿಗೆ ರಜೆ ಘೋಷಣೆ ಸುದ್ದಿ ಸುಳ್ಳು : ಸಚಿವ ಸುರೇಶ್ ಕುಮಾರ್ ಸ್ಪಷ್ಟನೆ

Spread the love

ಬೆಂಗಳೂರು : ಬೆಂಗಳೂರು ನಗರ ಹಾಗೂ ಗ್ರಾಮಾಂತರ ಪ್ರದೇಶಗಳಲ್ಲಿನ ಶಾಲೆಗಳಲ್ಲಿ ಕಲಿಯುತ್ತಿರುವ ಒಂದರಿಂದ ಆರನೇ ತರಗತಿ ವಿದ್ಯಾರ್ಥಿಗಳಿಗೆ ಇಂದಿನಿಂದ‌ ಬೇಸಿಗೆ ರಜೆ ಘೋಷಣೆ, ಪರೀಕ್ಷೆ ಇಲ್ಲದೇ‌ ಮುಂದಿನ ತರಗತಿಗೆ ಪಾಸ್ ಎಂಬ ಸುದ್ದಿ ದೃಶ್ಯ‌ಮಾಧ್ಯಮದ ಚಾನೆಲ್ ಒಂದರಲ್ಲಿ ಬಿತ್ತರವಾಗಿದ್ದು ಇದು ಸತ್ಯಕ್ಕೆ‌ ದೂರವಾದ ಸಂಗತಿ‌ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ಸ್ಪಷ್ಟಪಡಿಸಿದ್ದಾರೆ.

ಶಿಕ್ಷಣ ಇಲಾಖೆಯು ವಿದ್ಯಾರ್ಥಿಗಳ‌ ಪರ್ಯಾಯ ಕಲಿಕೆಯನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಈ ಬಗ್ಗೆ ಮುಕ್ತ ನಿಲುವನ್ನು ಹೊಂದಿದೆ. ಖಾಸಗಿ ಶಾಲೆಗಳು ಆನ್ ಲೈನ್ ಮೂಲಕ ಕಲಿಕೆಗೆ ಮುಂದಾಗಿವೆ. ಒಂದರಿಂದ ಐದರ‌ ತರಗತಿ ಸರ್ಕಾರಿ ಶಾಲಾ ಮಕ್ಕಳಿಗೆ ಆಕಾಶವಾಣಿಯಲ್ಲಿ ಕಲಿಯೋಣ ನಲಿಯೋಣ ಕಾರ್ಯಕ್ರಮ ಬಿತ್ತರ ಮಾಡಲಾಗುತ್ತಿದೆ. ದೂರದರ್ಶನದಲ್ಲಿ‌ ಸಂವೇದಾ‌ ಕಾರ್ಯಕ್ರಮ‌ ಪ್ರಸಾರಗೊಂಡಿದೆ. ಶಿಕ್ಷಕರು ವಿದ್ಯಾರ್ಥಿಗಳ‌ ಕಲಿಕೆಯ ಪ್ರಗತಿಯನ್ನು ತಮ್ಮದೇ ಸ್ಥಳೀಯ‌ ಸಂಪನ್ಮೂಲಗಳ ನೆರವಿನಲ್ಲಿ‌ ಪರಾಮರ್ಶೆ ಮಾಡುತ್ತಿದ್ದಾರೆ. ಇದು ರಾಜ್ಯಾದ್ಯಂತ ಜಾರಿಯಲ್ಲಿದ್ದು, ಈ ಹಂತದಲ್ಲಿ ಬೇಸಿಗೆ ರಜೆಯನ್ನು ಘೋಷಿಸುವ ಪ್ರಸ್ತಾಪ ಇಲಾಖೆಯ ಮುಂದಿಲ್ಲ ಎಂದು ಅವರು ಸ್ಪಷ್ಟ‌ಪಡಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ