Breaking News

ಕೆಪಿಸಿಸಿ ಅಧ್ಯಕ್ಷರಿಗೆ ಸತೀಶ್ ಜಾರಕಿಹೊಳಿ ತಿರುಗೇಟು

Spread the love

ಬೆಂಗಳೂರು,ಮಾ.14- ಯಾರು ಯಾರನ್ನು ಸಿಲಿಕಿಸಲು ಆಗುವುದಿಲ್ಲ. ಪ್ರಕರಣ ಸಂಬಂಧ ತನಿಖೆಯಾಗಬೇಕು. ಪೊಲೀಸರೇ ಅಂತಿಮ ತೀರ್ಮಾನ ಮಾಡಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದ್ದಾರೆ. ಸಿ.ಡಿ ಪ್ರಕರಣದಲ್ಲಿ ತಮ್ಮನ್ನು ಸಿಲುಕಿಸಲಾಗುತ್ತಿದೆ ಎಂಬ ಡಿ.ಕೆ.ಶಿವಕುಮಾರ್ ಹೇಳಿಕೆಗೆ ಸಂಬಂಧಿಸಿದಂತೆ ಬೆಳಗಾವಿ ತಾಲ್ಲೂಕಿನ ಮಚ್ಚೆಗ್ರಾಮದಲ್ಲಿ ಸುದ್ದಿಗಾರರೊಂದಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದರು.

ಯಾರು ಯಾರನ್ನೂ ಸಿಲಿಕಿಸಲು ಆಗುವುದಿಲ್ಲ. ಪೊಲೀಸ್ ತನಿಖೆಯಾಗಬೇಕು. ಸತ್ಯಾಂಶ ಹೊರಬರಬೇಕು. ನಾನು ಪದೇ ಪದೇ ಹೇಳೋದು ಅದನ್ನೇ ಎಂದರು. ಸಿ.ಡಿಯಲ್ಲಿದ್ದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಅವರು ರಮೇಶ್ ಜಾರಕಿಹೊಳಿ ಈಗಾಗಲೇ ಪೊಲೀಸರಿಗೆ ದೂರು ಕೊಟ್ಟಿದ್ದಾರೆ. ತನಿಖೆಯಾಗಿ ಸತ್ಯಾಂಶ ಹೊರಬಂದೇ ಬರುತ್ತದೆ. ಅಲ್ಲಿಯವರೆಗೆ ಕಾದು ನೋಡೋಣ,ಪೊಲೀಸರೇ ಇದಕ್ಕೆ ಪರಿಹಾರ ಹೇಳಬೇಕು. ನನಗೆ ಪ್ರಕರಣದ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ತಕ್ಷಣಕ್ಕೆ ಏನೂ ಹೇಳುವುದಕ್ಕೆ ಆಗುವುದಿಲ್ಲ ಎಂದು ಹೇಳೀದರು.ಯುವತಿ ಹೇಳಿಕೆ ಆಯ್ತು. ಲೀಗಲ್ ಆಗಿ ಮುಂದೆ ಬರಬೇಕಲ್ಲ? ಆ ಯುವತಿಗೆ ಅನ್ಯಾಯವಾಗಿದ್ದರೆ ವೇದಿಕೆಯಿದೆ. ಯುವತಿ ಹೇಳಿಕೆ ಬಳಿಕ ಪೊಲೀಸರ ಪಾತ್ರ ಬಹಳ ದೊಡ್ಡದಿದೆ ಎಂದರು. ರಾಜಕೀಯ ಷಡ್ಯಂತ್ರದ ಬಗ್ಗೆ ನನಗೇನೂ ಗೊತ್ತಿಲ್ಲ. ಈಗ ರಮೇಶ್ ಜಾರಕಿಹೊಳಿ ತಮ್ಮನ್ನು ಬ್ಲಾಕ್‍ಮೇಲ್ ಮಾಡಿದ್ದಾಗಿ ಹೇಳಿದ್ದಾರೆ. ಯುವತಿಗೆ ಏನು ಅನ್ಯಾಯವಾಗಿದೆ ಎಂದು ಮುಂದೆ ಬಂದು ಹೇಳಬೇಕು. ಪೊಲೀಸರ ತನಿಖೆ ಬಳಿಕವಷ್ಟೇ ಎಲ್ಲಾ ಸತ್ಯಾಂಶ ಗೊತ್ತಾಗುತ್ತದೆ ಎಂದು ಹೇಳಿದರು


Spread the love

About Laxminews 24x7

Check Also

ರಾಜಕಾರಣಿಗಳು, ಸಹಚರರ ಜೊತೆ ಮಲಗು ಎಂದು ಪೀಡಿಸುವ ಗಂಡ! 6 ಬಾರಿ ತಲಾಖ್, ಅಬಾರ್ಷನ್

Spread the loveಬೆಂಗಳೂರು, ಜುಲೈ 1: ಗಂಡನಾದವನೇ ಹೆಂಡತಿಯನ್ನು ಬೇರೆಯವರ ಜತೆ ಮಲಗುವಂತೆ ಪೀಡಿಸಿದರೆ, ಅದಕ್ಕಾಗಿ ಹಿಂಸಿಸಿದರೆ ಮಹಿಳೆಯ ಸ್ಥಿತಿ ಹೇಗಾಗಬಹುದು! …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ