Breaking News

ಸಾಹುಕಾರ್ ಸಿಡಿ ಕೇಸ್ – ಯುವತಿಗೆ ನೋಟಿಸ್ ಜಾರಿ

Spread the love

ಬೆಂಗಳೂರು: ಮಾಜಿ ಸಚಿವ ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂತ್ರಸ್ತ ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.

ಸಿಡಿ ಪ್ರಕರಣದ ಬಗ್ಗೆ ರಮೇಶ್ ಜಾರಕಿಹೊಳಿ ನಿನ್ನೆ ದೂರು ದಾಖಲಿಸಿದ ಬೆನ್ನಲ್ಲೇ ಪ್ರತ್ಯಕ್ಷವಾದ ಯುವತಿ ವಿಡಿಯೋ ಹೇಳಿಕೆ ಬಿಡುಗಡೆ ಮಾಡಿದ್ದಳು. ತನಗೆ ಹಾಗೂ ತನ್ನ ಕುಟುಂಬಕ್ಕೆ ಜೀವ ಬೆದರಿಕೆಯಿದೆ. ರಕ್ಷಣೆ ನೀಡುವಂತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಳು. ಅಲ್ಲದೇ ತನಗೆ ಹಾಗೂ ತನ್ನ ಕುಟುಂಬಕ್ಕೆ ಆಗುತ್ತಿರುವ ತೊಂದರೆಗಳನ್ನು ವಿವರಿಸಿದ್ದಳು.

ಈ ಬಗ್ಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿದ್ದು, ಯುವತಿ ಹಾಗೂ ಆಕೆ ಕುಟುಂಬಕ್ಕೆ ಜೀವಭಯವಿರುವುದು ಗಮನಕ್ಕೆ ಬಂದಿದೆ. ಸೂಕ್ತ ರಕ್ಷಣೆ ನೀಡುವಂತೆ ಎಸ್ ಐ‌ ಟಿಗೆ ಸೂಚಿಸಲಾಗಿದೆ ಎಂದಿದ್ದಾರೆ. ಇದರ ಬೆನ್ನಲ್ಲೇ ಈಗ ಕಬ್ಬನ್ ಪಾರ್ಕ್ ಠಾಣೆ ಪೊಲೀಸರು ಯುವತಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ.

ಯುವತಿ ವಾಸವಾಗಿದ್ದ ಮನೆ ಹಾಗೂ ಆಕೆಯ ಸ್ನೇಹಿತರಿಗೂ ಪೊಲೀಸರು ನೋಟಿಸ್ ತಲುಪಿಸಿದ್ದು, ವಿಚಾರಣೆಗೆ ಯುವತಿ ಹಾಜರಾಗಲಿದ್ದಾರಾ ಕಾದು‌ ನೋಡಬೇಕಿದೆ.


Spread the love

About Laxminews 24x7

Check Also

ಬೆಂಗಳೂರಿಂದ ತಿರುಪತಿಗೆ ಹೊರಟಿದ್ದ ಕಾರು ಅಪಘಾತ; ಅಪ್ಪ-ಅಮ್ಮ, 4 ವರ್ಷದ ಮಗು ಸ್ಥಳದಲ್ಲೇ ಸಾವು

Spread the loveಬೆಂಗಳೂರು: ನಗರದಿಂದ ತಿರುಪತಿ ವೆಂಕಟೇಶ್ವರ ಸ್ವಾಮಿ  ದರ್ಶನಕ್ಕೆ ಹೊರಟಿದ್ದ ಒಂದೇ ಕುಟುಂಬದ ಮೂವರು ಭೀಕರ ಅಪಘಾತದಲ್ಲಿ ( …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ