Breaking News

ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾದ ಶಿವರಾಜ್ ಕುಮಾರ್

Spread the love

ಬೆಂಗಳೂರು: ಸ್ಯಾಂಡಲ್ ವುಡ್ ನಟ, ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅವರು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರನ್ನು ಸೋಮವಾರ ಭೇಟಿಯಾಗಿ ಮಾತುಕತೆ ನಡೆಸಿದರು.

ಡಿ ಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದಲ್ಲಿ ಇಂದು ಬೆಳಗ್ಗೆ ಶಿವರಾಜ್ ಕುಮಾರ್ ಭೇಟಿಯಾದರು.

ಜೆಡಿಎಸ್ ನಲ್ಲಿದ್ದ ಮಧು ಬಂಗಾರಪ್ಪ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಅವರ ಸಹೋದರಿ, ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಕೂಡಾ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎನ್ನುವ ಸುದ್ದಿಗಳ ನಡುವೆ ಈ ಭೇಟಿ ಮಹತ್ವ ಪಡೆದಿದೆ. ಪತ್ನಿ ಗೀತಾ ಕಾಂಗ್ರೆಸ್ ಪಕ್ಷ ಸೇರ್ಪಡೆ ವಿಚಾರದ ಬಗ್ಗೆ ಕೆಪಿಸಿಸಿ ಅಧ್ಯಕ್ಷರ ಬಳಿಗೆ ಚರ್ಚಿಸಲು ಶಿವರಾಜ್ ಕುಮಾರ್ ತೆರಳಿದ್ದಾರೆ ಎನ್ನಲಾಗುತ್ತಿದೆ.ಆದರೆ ಈ ಬಗ್ಗೆ ಮಾತನಾಡಿದ ಶಿವರಾಜ್ ಕುಮಾರ್, ನಾನು ರಾಜಕೀಯ ಮಾತನಾಡಲು ಹೋಗಿಲ್ಲ. ಸೌಜನ್ಯದ ಭೇಟಿಯಷ್ಟೇ ಎಂದರು.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ