Breaking News

ಕಿತ್ತೂರು ಕರ್ನಾಟಕಕ್ಕೆ 371 ಜೆ ವಿಶೇಷ ಸ್ಥಾನ ನೀಡಿ : ಮಾಜಿ ಶಾಸಕ ಕೋನರೆಡ್ಡಿ ಆಗ್ರಹ

Spread the love

ಬೆಳಗಾವಿ : ಕಲ್ಯಾಣ ಕರ್ನಾಟಕದ ಭಾಗದ ಜಿಲ್ಲೆಗಳಿಗೆ ನೀಡಿರುವ ಸಂವಿಧಾನದ ಪರಿಚ್ಛೇದ 371 ಜೆ ತಿದ್ದುಪಡಿ ಮಾಡಿ ಮುಂಬೈ ಕರ್ನಾಟಕದ ಪ್ರದೇಶದ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸುವಂತೆ ಮಾಜಿ ಶಾಸಕ ಎನ್.ಹೆಚ್. ಕೋನರೆಡ್ಡಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ವಿಭಾಗದ ಧಾರವಾಡ, ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ, ಹಾವೇರಿ ಹಾಗೂ ಗದಗ ಜಿಲ್ಲೆಗಳಿಗೆ ವಿಶೇಷ ಸ್ಥಾನಮಾನ ಕಲ್ಪಿಸಿಕೊಡಬೇಕು ಎಂದು ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

ಡಾ. ನಂಜುಂಡಪ್ಪ ವರದಿ ಜಾರಿಯಾದರೂ ಹೆಚ್ಚು ಅಭಿವೃದ್ಧಿಯಾಗಿಲ್ಲ. ಡಾ. ಪರಮಶಿವಯ್ಯ ವರದಿ ನೀಡಿದರೂ ಅನುದಾನ ಕೊರತೆಯಿಂದ ಅಭಿವೃದ್ಧಿ ಸಾಧ್ಯವಾಗಿಲ್ಲ. ಹೀಗಾಗಿ ಮುಂಬೈ ಕರ್ನಾಟಕಕ್ಕೂ 371 ಜೆ ವಿಶೇಷ ಸ್ಥಾನ ನೀಡುವ ಅವಶ್ಯವಿದೆ ಎಂದು ಕೋನಾರೆಡ್ಡಿ ಹೇಳಿದ್ದಾರೆ.


Spread the love

About Laxminews 24x7

Check Also

ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿ ಪ್ರಕಟ

Spread the loveಬೆಂಗಳೂರು: ರಾಜ್ಯದ ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪ್ರಮುಖ ಘಟ್ಟವಾದ ಎಸ್‌‍ಎಸ್‌‍ಎಲ್‌ಸಿ ವಾರ್ಷಿಕ ಪರೀಕ್ಷೆಯ ವೇಳಾಪಟ್ಟಿಯನ್ನು ಕರ್ನಾಟಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ