Breaking News

ಪ್ರಜ್ವಲ್ ರೇವಣ್ಣ ನಿವಾಸಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್

Spread the love

ಹಾಸನ: ಸಂಸದ ಪ್ರಜ್ವಲ್ ರೇವಣ್ಣ ಬೆಂಬಲಿಗರು ಆಯೋಜಿಸಿದ್ದ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಭಾಗಿಯಾಗಿದ್ದಾರೆ.

ಇದೇ ಸಂದರ್ಭದಲ್ಲಿ ಅವರು ಮಾಜಿ ಸಚಿವ ಹೆಚ್.ಡಿ. ರೇವಣ್ಣ ಕುಟುಂಬದ ಆತಿಥ್ಯ ಸ್ವೀಕರಿಸಿದ್ದಾರೆ. ಬೆಂಗಳೂರಿನಿಂದ ಪ್ರಜ್ವಲ್ ಅವರೊಂದಿಗೆ ಆಗಮಿಸಿದ ದರ್ಶನ್ ಅವರನ್ನು ಜೆಡಿಎಸ್ ಬೆಂಬಲಿಗರು, ಅಭಿಮಾನಿಗಳು ಸ್ವಾಗತಿಸಿದ್ದಾರೆ. ದರ್ಶನ್ ಆಗಮನದ ಸುದ್ದಿ ತಿಳಿದ ಅಪಾರ ಸಂಖ್ಯೆಯ ಅಭಿಮಾನಿಗಳು ಅವರನ್ನು ನೋಡಲು ಮುಗಿಬಿದ್ದಿದ್ದಾರೆ.

ಪ್ರಜ್ವಲ್ ರೇವಣ್ಣ ಅವರೊಂದಿಗೆ 8 ವರ್ಷಗಳಿಂದ ಗೆಳೆತನವಿದೆ ಎಂದು ಹೇಳಿದ ದರ್ಶನ್ ಮಹಿಳಾ ದಿನಾಚರಣೆ ಕಾರ್ಯಕ್ರಮದಲ್ಲಿ ಸಾಧಕರನ್ನು ಸನ್ಮಾನಿಸಿದ್ದಾರೆ. ಅವರನ್ನು ನೋಡಲು ಅಭಿಮಾನಿಗಳ ನೂಕುನುಗ್ಗಲು ಉಂಟಾಗಿದೆ ರೇವಣ್ಣ ನಿವಾಸಕ್ಕೆ ಆಗಮಿಸಿದ ದರ್ಶನ್ ಆತಿಥ್ಯ ಸ್ವೀಕರಿಸಿ ಅಲ್ಲಿಂದ ತೆರಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ