Breaking News

ರಾಜ್ಯ ಸರ್ಕಾರದಿಂದ ಬಡ ಜನತೆಗೆ ಬಿಗ್ ಶಾಕ್ : ಹೊಸ `BPL’ ಕಾರ್ಡ್ ನೀಡುವ ಪ್ರಕ್ರಿಯೆ ಸ್ಥಗಿತ

Spread the love

ಬೆಂಗಳೂರು : ರಾಜ್ಯ ಸರ್ಕಾರವು ಬಡ ಜನತೆಗೆ ಮತ್ತೊಂದು ಶಾಕ್ ನೀಡಿದ್ದು, ಕೊರೊನಾ ಕಾರಣ ನೀಡಿ ಒಂದು ವರ್ಷದಿಂದ ರೇಷನ್ ಕಾರ್ಡ್ ನೀಡುವ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಲಾಗಿದೆ. ರಾಜ್ಯದಲ್ಲಿ ಕೊರೊನಾ 2 ನೇ ಅಲೆ ಭೀತಿ ಎದುರಾಗಿರುವ ಹಿನ್ನೆಲೆಯಲ್ಲಿ ಅರ್ಜಿ ಸಲ್ಲಿಸುವವರು ಹಾಗೂ ಅರ್ಜಿ ಸಲ್ಲಿಸಲು ಕಾಯುತ್ತಿರುವವರು ಮತ್ತಷ್ಟು ದಿನ ಕಾಯುವುದು ಅನಿವಾರ್ಯವಾಗಿದೆ.

`

ರಾಜ್ಯ ಸರ್ಕಾರವು ಬಿಪಿಎಲ್ ಕಾರ್ಡ್ ಪಡೆಯಲು ಆನ್ ಲೈನ್ ಅರ್ಜಿಸಲ್ಲಿಸಲು ಅವಕಾಶ ನೀಡಿದ್ದರೂ, ಸರ್ಕಾರ ಆದೇಶ ಹೊರಡಿಸಿದ ಬಳಿಕವಷ್ಟೇ ಅರ್ಜಿಗಳ ವಿಲೇವಾರಿ ಪ್ರಕ್ರಿಯೆ ಶುರುವಾಗಲಿದೆ. ಆದರೆ ಸರ್ಕಾರ ಈವರೆಗೂ ಆದೇಶ ಹೊರಡಿಸಿಲ್ಲ. ಇದರಿಂದಾಗಿ ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಬಿಪಿಎಲ್ ಕಾರ್ಡ್ ಇಲ್ಲದಿರುವುದು ಸಂಕಷ್ಟ ಎದುರಾಗಿದೆ.

 

ಗಂಭೀರ ಕಾಯಿಲೆಗಳಿಂದ ಬಳಲುತ್ತಿರುವ ಬಡ ರೋಗಿಗಳಿಗೆ ಬಿಪಿಎಲ್ ಕಾರ್ಡ್ ಇದ್ದರೆ ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಚಿಕಿತ್ಸೆ ಸೇರಿ ಇನ್ನಿತರ ಸೌಲಭ್ಯಗಳು ಸಿಗಲಿದ್ದು, ಆದರೆ, ಬಿಪಿಎಲ್ ಕಾರ್ಡ್ ಇಲ್ಲದೇ ಬಡ ರೋಗಿಗಳಿಗೆ ಸಂಕಷ್ಟ ಎದುರಾಗಿದೆ.


Spread the love

About Laxminews 24x7

Check Also

ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ಕೊಟ್ಟರೆ SIT ರಚನೆ: ಪ್ರಿಯಾಂಕ್ ಖರ್ಗೆ

Spread the loveಬೆಂಗಳೂರು: ಡಿಸಿಗಳು ಚುನಾವಣಾ ಆಯೋಗಕ್ಕೆ ದೂರು ನೀಡಿದ ಬಳಿಕ ಫಾರ್ಮ್-7 ದುರ್ಬಳಕೆ ಬಗ್ಗೆ ವಿಶೇಷ ತನಿಖಾ ತಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ