ಪುಣೆ: ‘ಮಹಾರಾಷ್ಟ್ರದ ಪುಣೆಯ ಹಣ್ಣು ಮತ್ತು ತರಕಾರಿಯ ಹಳೆಯ ಮಾರುಕಟ್ಟೆಯೊಂದರಲ್ಲಿ ಮಂಗಳವಾರ ಬೆಳಿಗ್ಗೆ ದೊಡ್ಡ ಪ್ರಮಾಣದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಇದರಲ್ಲಿ 25 ಕ್ಕೂ ಹೆಚ್ಚು ಅಂಗಡಿಗಳು ನಾಶವಾಗಿದೆ’ ಎಂದು ಅಗ್ನಿಶಾಮಕ ದಳದ ಅಧಿಕಾರಿಗಳು ತಿಳಿಸಿದರು.
‘ಪುಣೆಯ ಪ್ರಸಿದ್ಧ ಶಿವಾಜಿ ಮಾರುಕಟ್ಟೆಯಲ್ಲಿ ಮಂಗಳವಾರ ನಸುಕಿನ 4 ಗಂಟೆಗೆ ಬೆಂಕಿ ಕಾಣಿಸಿಕೊಂಡಿದ್ದು, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ 25 ಅಂಗಡಿಗಳು ಸುಟ್ಟು ಹೋಗಿವೆ’ ಎಂದು ಅಧಿಕಾರಿಯೊಬ್ಬರು ಹೇಳಿದರು.
‘ನಮಗೆ ಈ ಬಗ್ಗೆ ಮಾಹಿತಿ ಸಿಕ್ಕ ಕೂಡಲೇ ಒಂಬತ್ತು ನೀರಿನ ಟ್ಯಾಂಕರ್‌ಗಳನ್ನು ಘಟನಾ ಸ್ಥಳಕ್ಕೆ ಕಳುಹಿಸಿದೆವು. ಅಗ್ನಿ ಶಾಮಕ ದಳ ಸಿಬ್ಬಂದಿಯು ಅರ್ಧ ಗಂಟೆಗೊಳಗೆ ಬೆಂಕಿ ನಂದಿಸುವಲ್ಲಿ ಸಫಲರಾದರು’ ಎಂದು ಪುಣೆ ಮಹಾನಗರ ಪಾಲಿಕೆಯ ಅಗ್ನಿಶಾಮಕ ವಿಭಾಗದ ಮುಖ್ಯಸ್ಥ ಪ್ರಶಾಂತ್ ರಾನ್‌ಪೈಸ್ ಮಾಹಿತಿ ನೀಡಿದರು.
‘ಈ ಬೆಂಕಿ ಅವಘಡದಲ್ಲಿ ಯಾರಿಗೂ ಗಾಯಗಳಾಗಿಲ್ಲ. ಬೆಂಕಿ ಹೇಗೆ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಮಾಹಿತಿ ಲಭ್ಯವಿಲ್ಲ’ ಎಂದು ಅವರು ಹೇಳಿದರು.
Laxmi News 24×7