ಬೆಂಗಳೂರು: ಆದಾಯಕ್ಕಿಂತ ಹೆಚ್ಚು ಆಸ್ತಿ ಹೊಂದಿರುವ ಆರೋಪದ ಮೇಲೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಬಂಧಿಸಿರುವ ಬೆಂಗಳೂರು ಮಹಾನಗರ ಕಾರ್ಯಪಡೆ (ಬಿಎಂಟಿಎಫ್) ಇನ್‌ಸ್ಪೆಕ್ಟರ್ ವಿಕ್ಟರ್ ಸೈಮನ್ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಮಾರ್ಚ್ 9ರಂದು ವಿಕ್ಟರ್ ಅವರ ಮನೆ ಮೇಲೆ ದಾಳಿಮಾಡಿದ್ದ ಎಸಿಬಿ ಅಧಿಕಾರಿಗಳು ಶೋಧ ನಡೆಸಿದ್ದರು. ತನಿಖೆಗೆ ಸಹಕರಿಸದ ಆರೋಪದ ಮೇಲೆ ಮಾ.10ರಂದು ಅವರನ್ನು ಬಂಧಿಸಲಾಗಿತ್ತು. ಸೋಮವಾರವರೆಗೂ ವಿಚಾರಣೆಗಾಗಿ ಆರೋಪಿ ಅಧಿಕಾರಿಯನ್ನು ಎಸಿಬಿ ತನಿಖಾ ತಂಡದ ವಶಕ್ಕೆ ನೀಡಿ ನ್ಯಾಯಾಲಯ ಆದೇಶ ಹೊರಡಿಸಿತ್ತು.
ಸೋಮವಾರ ಮಧ್ಯಾಹ್ನ ವಿಕ್ಟರ್ ಅವರನ್ನು ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ ಪ್ರಕರಣಗಳ ವಿಶೇಷ ನ್ಯಾಯಾಲಯದ ಎದುರು ಎಸಿಬಿ ಅಧಿಕಾರಿಗಳು ಹಾಜರುಪಡಿಸಿದರು. ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಧೀಶರು ಆದೇಶ ಹೊರಡಿಸಿದರು.
Laxmi News 24×7