Breaking News

ಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ: ಪ್ರಮೋದ್ ಮುತಾಲಿಕ್

Spread the love

ಧಾರವಾಡ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಬಿಜೆಪಿಯಿಂದ ನನಗೆ ಟಿಕೆಟ್ ಸಿಗುವ ವಿಶ್ವಾಸವಿದೆ ಎಂದು ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಹೇಳಿದ್ದಾರೆ.

ಧಾರವಾಡದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುತಾಲಿಕ್, ಈಗಾಗಾಲೇ ಬಿಜೆಪಿ ನಾಯಕರ ಜೊತೆ ಮೂರು ಸುತ್ತಿನ ಮಾತುಕತೆ ನಡೆಸಲಾಗಿದೆ. ನಾಯಕರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜಕಾರಣದಲ್ಲಿ ಜಾತಿ, ಹಣ ಎಲ್ಲ ಇರುವುದರಿಂದ ಶೇ.80ರಷ್ಟು ನನಗೇ ಟಿಕೆಟ್ ಸಿಗುವ ಭರವಸೆ ಇದೆ ಎಂದರು.

ಒಂದು ವೇಳೆ ಬಿಜೆಪಿ ಟಿಕೆಟ್ ಸಿಗದಿದ್ದರೆ ಪಕ್ಷ ಯಾರಿಗೆ ಟಿಕೆಟ್ ನೀಡುತ್ತೋ ಅವರ ಪರ ಕೆಲಸ ಮಾಡುತ್ತೇನೆ. ಕಳೆದ 40 ವರ್ಷಗಳಿಂದ ಹಿಂದುತ್ವದ ಪರ ಕೆಲಸಮಾಡಿದ್ದು, ಸೇವೆ ಮಾಡಲು ಪಕ್ಷ ಅವಕಾಶ ನೀಡಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ