Breaking News
Home / ಜಿಲ್ಲೆ / ಬೆಳಗಾವಿ / ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

ರಮೇಶ್ ಜಾರಕಿಹೊಳಿ ಪ್ರಕರಣಕ್ಕೆ ಹೊಸ ತಿರುವು : ಯುವತಿಯ ಅಪಹರಣವಾಗಿದೆ ಎಂದು ಪೋಷಕರ ದೂರು

Spread the love

ಬೆಳಗಾವಿ: ಮಾಜಿ ಸಚಿವ ರಮೇಶ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಮತ್ತೂಂದು ಮಹತ್ವದ ತಿರುವು ಸಿಕ್ಕಿದ್ದು, ಸಿಡಿಯಲ್ಲಿರುವ ತಮ್ಮ ಮಗಳನ್ನು ಅಪಹರಿಸಲಾಗಿದೆ ಎಂದು ಯುವತಿಯ ಪಾಲಕರು ಬೆಳಗಾವಿಯ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿ ದ್ದಾರೆ. ಇದರೊಂದಿಗೆ ಪ್ರಕರಣ ಮತ್ತೂಂದು ಮಜಲು ಪಡೆದುಕೊಂಡಿದೆ.

ಬೆಳಗಾವಿಯ ಹನುಮಾನ ನಗರದ ನಿವಾಸಿಯಾದ ಯುವತಿಯ ಪಾಲಕರು ತಮ್ಮ ಮಗಳನ್ನು ಮಾ.2ರಂದು ಬೆಂಗಳೂರಿನಲ್ಲಿ ಅಪಹರಣ ಮಾಡಿದ್ದಾರೆಂದು ದೂರಿನಲ್ಲಿ ತಿಳಿಸಿದ್ದು, ಎಪಿಎಂಸಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಿದ್ದಾರೆ. ತಮ್ಮ ಮಗಳನ್ನು ಅಪಹರಿಸಿ ನಂತರ ಅಕ್ರಮ ಬಂಧನದಲ್ಲಿಟ್ಟು ನಕಲಿ ಸಿಡಿ ಮಾಡಿ ಅದನ್ನು ಮಾಧ್ಯಮಗಳಿಗೆ ನೀಡಿ ಅವಮಾನ ಮಾಡಿದ್ದಲ್ಲದೆ ಲೈಂಗಿಕ ಕಿರುಕುಳ ನೀಡಿದ್ದಾರೆಂದು ದೂರಿನಲ್ಲಿ ಆರೋಪಿಸಿದ್ದಾರೆ. ಅದರಂತೆ ಐಪಿಸಿ ಸೆಕ್ಷನ್‌ 363, 368, 343, 346, 354 354ಎ ಹಾಗೂ 506ರ ಅಡಿಯಲ್ಲಿ ದೂರು ದಾಖಲಾಗಿದೆ.

ಬೆಂಗಳೂರಿನಲ್ಲಿ ಯಾರೋ ಅಪಹರಣ ಮಾಡಿ ಕಿರುಕುಳ ನೀಡುತ್ತಿದ್ದಾರೆಂದು ಯುವತಿಯ ಪಾಲಕರು ನೀಡಿದ ದೂರಿನ ಹಿನ್ನೆಲೆಯಲ್ಲಿ ಎಪಿಎಂಸಿ ಠಾಣೆಯಲ್ಲಿ ಪ್ರಕರಣ ಸಂಖ್ಯೆ 29/2021ರಲ್ಲಿ ಅಪಹರಣ ಪ್ರಕರಣ ದಾಖಲು ಮಾಡಿಕೊಳ್ಳಲಾಗಿದೆ ಎಂದು ಪೊಲೀಸ್‌ ಆಯುಕ್ತರು ತಿಳಿಸಿದ್ದಾರೆ.

ದೂರಿನಲ್ಲೇನಿದೆ?: ತಮ್ಮ ಪುತ್ರಿಯು ಬೆಂಗಳೂರಿನಲ್ಲಿ ಸಾಫ್ಟ್ವೇರ್‌ ಕಂಪನಿಯಲ್ಲಿ ಕೆಲಸ ಮಾಡಿಕೊಂಡು ಪಿಜಿಯಲ್ಲಿ ಇರುತ್ತಿದ್ದಳು. ರಜೆ ಇದ್ದಾಗ ಮನೆಗೆ ಬರುತ್ತಿದ್ದಳು. ಆದರೆ ಕಳೆದ ಕೆಲ ದಿನಗಳ ಹಿಂದೆ ಟಿವಿ ಮತ್ತು ಸಾಮಾಜಿಕ ಜಾಲತಾಣಗಳಲ್ಲಿ ಅಶ್ಲೀಲ ವಿಡಿಯೋ ಹರಿಬಿಟ್ಟಿದ್ದು ಅದರಲ್ಲಿ ತಮ್ಮ ಮಗಳಂತೆ ಕಾಣುವ ಯುವತಿ ವ್ಯಕ್ತಿಯೊಂದಿಗೆ ಅಶ್ಲೀಲವಾಗಿ ವರ್ತಿಸುತ್ತಿರುವುದನ್ನು ನೋಡಿ ಹೆದರಿಕೆಯಾಯಿತು. ಇದರ ಬಗ್ಗೆ ಮಗಳನ್ನು ವಿಚಾರಿಸಿದಾಗ ವಿಡಿಯೋದಲ್ಲಿರುವುದು ನಾನಲ್ಲ.

ನನ್ನಂತೆ ಕಾಣುವ ವಿಡಿಯೋ ಎಡಿಟ್‌ ಮಾಡಿ ಅದಕ್ಕೆ ನಕಲಿ ಧ್ವನಿ ಸೇರಿಸಿ ಅದನ್ನು ಹರಿಬಿಟ್ಟಿದ್ದಾರೆ ಎಂದು ತಿಳಿಸಿದ್ದಳು. ಸಿಡಿ ನಕಲಿ ಎಂದು ಸಾಬೀತಾದ ನಂತರ ಮನೆಗೆ ಬರುತ್ತೇನೆಂದು ಮೂರು ದಿನ ಸಂಪರ್ಕದಲ್ಲಿದ್ದಳು. ಕರೆ ಮಾಡಿದಾಗ ಭಯದಲ್ಲಿ ಮಾತನಾಡುತ್ತಿದ್ದಳು. ಎಲ್ಲಿದ್ದೇನೆ ಎಂಬುದು ನನಗೆ ಗೊತ್ತಿಲ್ಲ ಎಂದು ಹೇಳಿದ್ದಳು. ಇದನ್ನು ನೋಡಿದರೆ ಯಾರೋ ಅವಳನ್ನು ಅಪಹರಿಸಿ ಒತ್ತಾಯಪೂರ್ವಕವಾಗಿ ಅವಳ ವಿಡಿಯೋ ಮಾಡಿ ಬಿಡುತ್ತಿದ್ದಾರೆಂಬ ಅನುಮಾನ ಇದೆ. ಅಕೆಯ ಜೀವಕ್ಕೆ ಅಪಾಯ ಇದೆ. ನಮಗೆ ರಕ್ಷಣೆ ನೀಡಬೇಕು ಹಾಗೂ ಮಗಳನ್ನು ಹುಡುಕಿ ಕೊಡಬೇಕೆಂದು ಯುವತಿಯ ತಂದೆ ದೂರಿನಲ್ಲಿ ಮನವಿ ಮಾಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ