Breaking News

ಭಾರತದ ವಿರುದ್ಧ ಇಂಗ್ಲೆಂಡ್ ಗೆ ಭರ್ಜರಿ ಜಯ

Spread the love

ನಿನ್ನೆ ನಡೆದ ಭಾರತ ಹಾಗೂ ಇಂಗ್ಲೆಂಡ್ ನಡುವಣ ಟಿ20 ಸರಣಿಯ ಮೂರನೇ ಪಂದ್ಯದಲ್ಲಿ ಇಂಗ್ಲೆಂಡ್ ತಂಡದ ನಾಯಕ ಇಯಾನ್ ಮೊರ್ಗನ್ ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡರು.

ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ಆರಂಭದಲ್ಲಿ ಕೆಎಲ್ ರಾಹುಲ್ ಶೂನ್ಯಕ್ಕೆ ಔಟಾದರು ನಂತರ ಆರಂಭಿಕ ಆಟಗಾರ ರೋಹಿತ್ ಶರ್ಮ 15ರನ್ ಗಳಿಸಿದ್ದು ಮಾರ್ಕ್ ವುಡ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಇಶಾನ್ ಕಿಶನ್ 4ರನ್ ಗೆ ಕ್ರಿಸ್ ಜೋರ್ಡನ್ ಬೌಲಿಂಗ್‌ನಲ್ಲಿ ಔಟಾದರು. ನಾಯಕ ವಿರಾಟ್ ಕೊಹ್ಲಿ ಕೊನೆ ಹಂತದವರೆಗೂ ಭಾರತ ತಂಡಕ್ಕೆ ಬೆನ್ನೆಲುಬಾಗಿ ನಿಂತರು. 46 ಎಸೆತಗಳಲ್ಲಿ 77ರನ್ ಗಳಿಸಿದರು. 4 ಸಿಕ್ಸರ್ ಗಳು ಹಾಗೂ 8 ಬೌಂಡರಿಗಳನ್ನು ಸಿಡಿಸಿದರು ಒಟ್ಟಾರೆ ಭಾರತ ತಂಡ 6 ವಿಕೆಟ್ ನಷ್ಟಕ್ಕೆ 156ರನ್ ಗಳ ಮೊತ್ತ ದಾಖಲಿಸಿತು.

ಗುರಿ ಬೆನ್ನಟ್ಟಿದ ಇಂಗ್ಲೆಂಡ್ ತಂಡ ಆರಂಭದಲ್ಲಿ ಜೇಸನ್ ರಾಯ್ 9ರನ್ ಗೆ ಔಟಾದರು. ಬಳಿಕ ಬಂದ ಡೇವಿಡ್ ಮಲಾನ್ 18 ರನ್ ಗಳಿಸಿದ್ದು, ವಾಷಿಂಗ್ಟನ್ ಸುಂದರ್ ಗೆ ತಮ್ಮ ವಿಕೆಟ್ ಒಪ್ಪಿಸಿದರು. ಜೋಸ್ ಬಟ್ಲರ್ ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸಿದರು. 52 ಎಸೆತಗಳಲ್ಲಿ (83) ರನ್ ಗಳಿಸಿದ್ದು ಇವರ ಈ ಸ್ಫೋಟಕ ಇನಿಂಗ್ಸ್ ನಲ್ಲಿ 4 ಸಿಕ್ಸರ್ ಹಾಗೂ 5 ಬೌಂಡರಿಗಳಿದ್ದವು. ಜೋಸ್ ಬಟ್ಲರ್ ಅವರೊಂದಿಗೆ ಜಾನಿ ಬೈರ್ ಸ್ಟೋ ಉತ್ತಮ ಜೊತೆಯಾಟವಾಡಿದರು. 18.2 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 158ರನ್ ಗಳಿಸುವ ಮೂಲಕ ಭಾರತದ ವಿರುದ್ಧ ಭರ್ಜರಿ ಜಯ ಸಾಧಿಸಿತು. ಸರಣಿಯಲ್ಲಿ ಇಂಗ್ಲೆಂಡ್ ತಂಡ 2-1 ರಿಂದ ಮುನ್ನಡೆಯಲ್ಲಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ