Breaking News
Home / ನವದೆಹಲಿ / ಏಪ್ರಿಲ್ 1 ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿ ಪ್ರಯಾಣ

ಏಪ್ರಿಲ್ 1 ರಿಂದ ಮತ್ತಷ್ಟು ದುಬಾರಿಯಾಗಲಿದೆ ರಾಷ್ಟ್ರೀಯ ಹೆದ್ದಾರಿ ಪ್ರಯಾಣ

Spread the love

ನವದೆಹಲಿ : ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆಯ ಬೆನ್ನಲ್ಲೇ ವಾಹನ ಸವಾರರಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮತ್ತೊಂದು ಬಿಗ್ ಶಾಕ್ ನೀಡಿದ್ದು, ಎನ್ ಎಚ್‌ಎಐ ಟೋಲ್ ತೆರಿಗೆಯನ್ನು ಶೇ. 5 ರಷ್ಟು ಹೆಚ್ಚಿಸಲು ಸಿದ್ಧತೆ ನಡೆಸಿದೆ ಎನ್ನಲಾಗಿದೆ.

ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವು ಏಪ್ರಿಲ್ 1 ರಿಂದ ಟೋಲ್ ಪ್ಲಾಜಾ ಮೂಲಕ ಹಾದುಹೋಗುವ ವಾಹನಗಳಿಗೆ ಟೋಲ್ ಪ್ಲಾಜಾ ಮಾಜಿಸಕ ಪಾಸ್ 10 ರಿಂದ 20 ರೂ. ವರೆಗೆ ಹೆಚ್ಚಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ಇದರಿಂದ ರಾಷ್ಟ್ರೀಯ ಹೆದ್ದಾರಿ ಮೂಲಕ ಹಾದು ಹೋಗುವ ಪ್ರಯಾಣಿಕರಿಗೆ ಬೆಲೆ ಏರಿಕೆಯ ಬಿಸಿ ತಟ್ಟಲಿದೆ.

ಪ್ರತಿ ಹಣಕಾಸು ವರ್ಷದಲ್ಲಿ ಎನ್ ಎಚ್ ಎಐ ಟೋಲ್ ತೆರಿಗೆಯನ್ನು ಹೆಚ್ಚಿಸಲಾಗುತ್ತದೆ. ಫಾಸ್ಟ್ಯಾಗ್ ಕಡ್ಡಾಯಗೊಳಿಸಿದ ನಂತರ ತೆರಿಗೆಯನ್ನು ಹೆಚ್ಚಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಮುಂದಾಗಿದೆ.


Spread the love

About Laxminews 24x7

Check Also

‘ಅಂಬರೀಶ್ ಆಶೀರ್ವಾದದಿಂದ ಮಗನ ಸಿನಿಮಾ ಬಿಡುಗಡೆ’: ಅಂಬಿ ಸಮಾಧಿಗೆ ಪೂಜೆ ಸಲ್ಲಿಸಿದ ಸುಮಲತಾ

Spread the love ಮಂಡ್ಯ: ಇಂದು ಕನ್ನಡಿಗರ ಮೆಚ್ಚಿನ ನಟ ಅಂಬರೀಶ್ ಅವರ 5ನೇ ವರ್ಷದ ಪುಣ್ಯಸ್ಮರಣೆ ಹಿನ್ನೆಲೆ, ಮಂಡ್ಯದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ