ಬೆಂಗಳೂರು: ಜೈ ಶ್ರೀರಾಮ್, ಜೈ ಹನುಮಾನ್ ಎಂದು ಘೋಷಣೆ ಕೂಗಿದರೇ ಅಗತ್ಯ ವಸ್ತುಗಳ ಬೆಲೆ ಇಳಿಯಿತ್ತದೆಯೇ ಎಂದು ವಿಧಾನ ಪರಿಷತ್‌ನಲ್ಲಿ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಬುಧವಾರ ಪ್ರಶ್ನಿಸಿದರು.
ಬಜೆಟ್ ಮೇಲಿನ ಚರ್ಚೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ದರ ಏರಿಕೆಯಿಂದ ಅಗತ್ಯ ವಸ್ತುಗಳ ಬೆಲೆಯಲ್ಲಿ ಗಣನೀಯ ಏರಿಕೆ ಉಂಟಾಗಿರುವ ಹೆಚ್ಚಳದ ಕುರಿತು ಪ್ರಸ್ತಾಪಿಸುತ್ತಾ ಅವರು ಈ ಪ್ರಶ್ನೆ ಹಾಕಿದರು. ಇದರಿಂದ ಕೆರಳಿದ ಬಿಜೆಪಿ ಸದಸ್ಯರು ತೀವ್ರ ವಿರೋಧ ವ್ಯಕ್ತಪಡಿಸಿದರು.
ಬಿಜೆಪಿ ಸರ್ಕಾರ ಮಾನ, ಮರ್ಯಾದೆ ಕಳೆದುಕೊಂಡಿದೆ. ರೈತರು, ಕಾರ್ಮಿಕರು, ಬಡ ಜನರ ಮೇಲೆ ಸಾಲದ ಹೊರೆ ಹೊರಿಸುವ ಬಜೆಟ್ ಸ್ವೀಕಾರಾರ್ಹವಲ್ಲ’ ಎಂದು ಹೇಳಿದರು.
‘ರಾಜ್ಯದಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೆಲವೇ ಮಂದಿ ಐಎಎಸ್ ಅಧಿಕಾರಿಗಳು ಸರ್ಕಾರ ನಡೆಸುತ್ತಿದ್ದಾರೆ. ಅಧಿಕಾರಕ್ಕೆ ಬಂದ ತಕ್ಷಣ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ರದ್ದುಪಡಿಸಿ ಲೋಕಾಯುಕ್ತ ಬಲಗೊಳಿಸುವ ಭರವಸೆ ನೀಡಿದ್ದ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಈಗ ಮೌನ ತಾಳಿದ್ದಾರೆ ಎಂದು ಮರಿತಿಬ್ಬೇಗೌಡ ಆರೋಪಿಸಿದರು.
ಸಾಂಕ್ರಾಮಿಕ ಸಮಯದಲ್ಲಿ, ರೈತರು ಮತ್ತು ಕೃಷಿ ಕಾರ್ಮಿಕರು ಆರ್ಥಿಕತೆಯನ್ನು ಹೆಚ್ಚಿಸಿದರು. “ಆದರೆ ಅವರಿಗೆ ತೆರಿಗೆ ವಿನಾಯಿತಿ ನೀಡುವ ಬದಲು, 31 ಖಾಸಗಿ ಕಂಪನಿಗಳಿಗೆ 1,075 ಕೋಟಿ ರೂ. ಮತ್ತು 10 ಸಕ್ಕರೆ ಕಾರ್ಖಾನೆಗಳಿಗೆ 23.95 ಕೋಟಿ ರೂ.ಗಳ ತೆರಿಗೆಯನ್ನು ಸರ್ಕಾರ ಮನ್ನಾ ಮಾಡಿದೆ” ಎಂದು ಅವರು ಆರೋಪಿಸಿದರು.
ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ಹಣ ಪಡೆದುಕೊಳ್ಳುವುದು ಹೇಗೆ ಎಂದು ಸರ್ಕಾರ ಜನರಿಗೆ ಮಾಹಿತಿ ನೀಡಲು ವಿಫಲವಾಗಿದೆ ಎಂದು ಮರಿ ತಿಬ್ಬೇಗೌಡ ದೂರಿದರು.
https://youtu.be/kyxoU5IIGfs
Laxmi News 24×7