ಬೆಂಗಳೂರು : ಮಾಜಿ ಸಚಿವ ರಮೇಶ್ ಜಾರಕಿಹೊಳಿ ಅವರ ರಾಸಲೀಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೆಸರು ಕೇಳಿ ಬಂದಿರುವುದಕ್ಕೆ ಮಾಜಿ ಪತ್ರಕರ್ತರಾದ ನರೇಶ್ ಗೌಡ ಮತ್ತು ಭವಿತ್ ಎಂಬುವವುರು ಅಜ್ಞಾತ ಸ್ಥಳದಿಂದ ವಿಡಿಯೋ ಬಿಡುಗಡೆ ಮಾಡಿ ಮಾತನಾಡಿದ್ದಾರೆ.
ಭವಿತ್ ಮಾತನಾಡಿ, ಸಿಡಿ ಪ್ರಕರಣದಲ್ಲಿ ನನ್ನ ಹೆಸರು ಕೇಳಿ ಬಂದಿರುವುದು ಆಘಾತ ಉಂಟು ಮಾಡಿದೆ. ನಾನು ಪ್ರಕರಣದ ಸೂತ್ರದಾರನೂ ಅಲ್ಲ, ಭಾಗಿಯೂ ಆಗಿಲ್ಲ ಎಂದು ಹೇಳಿದ್ದಾರೆ. ಎಸ್ ಐಟಿ ಅಧಿಕಾರಿಗಳು ವಿಚಾರಣೆಗೆ ಕರೆದಿದ್ದು ನಾನು ಹೋಗುತ್ತಿದ್ದೇನೆ ಎಂದು ಹೇಳಿದ್ದಾರೆ.
ಇನ್ನು ನರೇಶ್ ಗೌಡ ಸಹ ವಿಡಿಯೋ ಮಾಡಿದ್ದು, ನನ್ನನ್ನು ಈ ಪ್ರಕರಣದಲ್ಲಿ ಸಿಕ್ಕಿಸಲು ಎಲ್ಲ ಪ್ರಯತ್ನಗಳು ನಡೆದಿವೆ. ಈ ಕಾರಣಕ್ಕೆ ನಾನು ಈಗ ಬಂದಿಲ್ಲ. ಕೆಲವು ದಿನಗಳ ಒಳಗಡೆ ನಾನೇ ತನಿಖಾಧಿಕಾರಿಗಳ ಮುಂದೆ ಹಾಜರಾಗುತ್ತೇನೆ ಎಂದು ಹೇಳಿದ್ದಾರೆ.
Laxmi News 24×7