Breaking News

ಬಸವ ಕಲ್ಯಾಣ ಉಪ ಚುನಾವಣೆಗೆ ಅಭ್ಯರ್ಥಿ ಘೋಷಿಸಿದ ಜೆಡಿಎಸ್

Spread the love

ಬೆಂಗಳೂರು: ಬಸವ ಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಣೆ ಮಾಡಿದೆ. ಮಾಜಿ ಮುಖ್ಯಮಂತ್ರಿ ಎಚ್ ಡಿ ಕುಮಾರಸ್ವಾಮಿ ಇಂದು ಅಭ್ಯರ್ಥಿ ಘೋಷಣೆ ಮಾಡಿದ್ದು, ಸೈಯ್ಯದ್ ಯಸ್ರಬ್ ಅಲಿ ಖಾದ್ರಿ ಅವರು ಬಸವಕಲ್ಯಾಣದಲ್ಲಿ ಜೆಡಿಎಸ್ ಚಿಹ್ನೆಯಡಿಯಲ್ಲಿ ಕಣಕ್ಕಿಳಿಯಲಿದ್ದಾರೆ.

ಮಸ್ಕಿ ಕ್ಷೇತ್ರದ ಅಭ್ಯರ್ಥಿಯನ್ನು ಶೀಘ್ರವೇ ಘೋಷಿಸಲಾಗುವುದು. ಬೆಳಗಾವಿ ಲೋಕಸಭೆ ಉಪಚುನಾವಣೆಗೆ ಸ್ಪರ್ಧೆ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ಎಚ್.ಡಿ. ಕುಮಾರಸ್ವಾಮಿ ಇದೇ ಸಂದರ್ಭದಲ್ಲಿ ಹೇಳಿದರು.

ಎಪ್ರಿಲ್ 17ರಂದು ಬೆಳಗಾವಿ ಲೋಕಸಭೆ, ಮಸ್ಕಿ ಮತ್ತು ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ. ಕಾಂಗ್ರೆಸ್ ಶಾಸಕರಾಗಿದ್ದ ಬಿ. ನಾರಾಯಣ ರಾವ್ ಅವರ ನಿಧನದಿಂದ ಬಸವ ಕಲ್ಯಾಣ ವಿಧಾನಸಭೆ ಕ್ಷೇತ್ರ ಖಾಲಿಯಾಗಿತ್ತು.


Spread the love

About Laxminews 24x7

Check Also

ಧರ್ಮದ ರಕ್ಷಣೆ ನಾವು ಮಾಡಿದರೆ ಮಾತ್ರ ನಮ್ಮನ್ನು ಧರ್ಮ ರಕ್ಷಣೆ ಮಾಡುತ್ತೆ ಡಾ. ಅಭಿನವ ಸ್ವಾಮೀಜಿ ಅಭಿಮತ

Spread the loveಗಡಿ ರಕ್ಷಣೆ ಮಾಡುವ ಸೈನಿಕರು ಧರ್ಮರಕ್ಷಣೆ ಮಾಡಬಹುದು ಎಂಬರಕ್ಕೆ ಉದಾಹರಣೆ ಅಂದರೆ ಸೈನಿಕರು ಕಾಗವಾಡದಲ್ಲಿ ಕಟ್ಟಿಸಿದ ವಿಠ್ಠಲ- …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ