Breaking News

ಕೆಎಸ್‌ಆರ್‌ಟಿಸಿ ಸಿಬ್ಬಂದಿ ತರಬೇತಿ ಅವಧಿ 2 ರಿಂದ ಒಂದು ವರ್ಷಕ್ಕೆ ಇಳಿಕೆ: ಲಕ್ಷ್ಮಣ ಸವದಿ

Spread the love

ಬೆಂಗಳೂರು: ರಾಜ್ಯದಲ್ಲಿ ಕೆಎಸ್‍ಆರ್‍ ಟಿಸಿ ಸಿಬ್ಬಂದಿ ತರಬೇತಿ ಅವಧಿಯನ್ನು ಎರಡರಿಂದ ಒಂದು ವರ್ಷಕ್ಕೆ ಕಡಿಮೆ ಮಾಡಬೇಕು ಎಂಬ ಸಾರಿಗೆ ಸಿಬ್ಬಂದಿಯ ಬೇಡಿಕೆಗೆ ಸರ್ಕಾರ ಸ್ಪಂದಿಸಿದ್ದು, ತರಬೇತಿ ಅವಧಿಯನ್ನು ಎರಡು ವರ್ಷದಿಂದ ಒಂದು ವರ್ಷಕ್ಕೆ ಇಳಿಸಲಾಗಿದೆ ಎಂದು ಉಪ ಮುಖ್ಯಮಂತ್ರಿ ಹಾಗೂ ಸಾರಿಗೆ ಸಚಿವ ಲಕ್ಷ್ಮಣ್‍ ಸವದಿ ಅವರು ಗುರುವಾರ ಹೇಳಿದ್ದಾರೆ.

ಇದು ರಾಜ್ಯದ ನಾಲ್ಕು ಸಾರಿಗೆ ಸಂಸ್ಥೆಗಳಾದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ, ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳಿಗೆ ಅನ್ವಯಿಸುತ್ತದೆ ಎಂದು ಸಚಿವರು ಟ್ವೀಟ್‍ ಮಾಡಿದ್ದಾರೆ.

ಈ ಆದೇಶ ಜುಲೈ 2021ರಿಂದ ಜಾರಿಯಾಗಲಿದೆ. ತರಬೇತಿ ಎರಡು ವರ್ಷಗಳ ಬದಲು ಕೇವಲ ಒಂದು ವರ್ಷದ ಅವಧಿಯಾಗಿದ್ದು, ಇದಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಅವರು ಹೇಳಿದ್ದಾರೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ