Breaking News

ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರಿಗೆ ಗುಡ್ ನ್ಯೂಸ್

Spread the love

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಕುರಿತಾಗಿ ಕ್ರಮಕೈಗೊಳ್ಳಲಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

ಜೆಡಿಎಸ್ ಸದಸ್ಯ ಶ್ರೀಕಂಠೇಗೌಡ ಅವರು ಅಂಗನವಾಡಿ ಕಾರ್ಯಕರ್ತೆಯರ ಹೋರಾಟದ ಬಗ್ಗೆ ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದಾಗ ಸಚಿವರು ಈ ಬಗ್ಗೆ ಮಾಹಿತಿ ನೀಡಿ, ಸೇವಾ ಹಿರಿತನದ ಮೇಲೆ ಗೌರವ ಧನ ನಿಗದಿ ಮಾಡುವ ಪ್ರಸ್ತಾವನೆಯನ್ನು ಆರ್ಥಿಕ ಇಲಾಖೆಯೊಂದಿಗೆ ಸಮಾಲೋಚನೆ ನಡೆಸಿ ಪರಿಶೀಲನೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ವೈದ್ಯಕೀಯ ಸೇವೆ ನೀಡಲು ಪರಿಶೀಲನೆ ನಡೆಸಿದ್ದು, NPS ಲೈಟ್ ಯೋಜನೆಯಡಿ ನೊಂದಣಿಯಾಗದ ಕಾರ್ಯಕರ್ತೆಯರಿಗೆ ಇಡಗಂಟು ನೀಡಲು ಸಲ್ಲಿಸಿದ ಪ್ರಸ್ತಾವನೆಗೆ ಇನ್ನೂ ಅನುಮೋದನೆ ದೊರೆತಿಲ್ಲ. ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವುದಾಗಿ ಸಚಿವರು ಹೇಳಿದ್ದಾರೆ.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ