Breaking News

ಚೇಂಬರ್ ನಲ್ಲೇ ವಿದ್ಯಾರ್ಥಿನಿ ಮೇಲೆ ಅಧ್ಯಾಪಕನಿಂದ ಅತ್ಯಾಚಾರ: ಫೇಲ್ ಮಾಡುವುದಾಗಿ ಬೆದರಿಸಿ ಕೃತ್ಯ

Spread the love

ಹಾವೇರಿ ಜಿಲ್ಲೆ ರಾಣೆಬೆನ್ನೂರು ತಾಲೂಕಿನ ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಅಧ್ಯಾಪಕನೊಬ್ಬ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ ಎಸಗಿದ ಘಟನೆ ಬಗ್ಗೆ ದೂರು ದಾಖಲಾಗಿದೆ.

ರಾಣೆಬೆನ್ನೂರು ಗ್ರಾಮಾಂತರ ಠಾಣೆ ಪೊಲೀಸರಿಗೆ ವಿದ್ಯಾರ್ಥಿನಿ ದೂರು ನೀಡಿದ್ದು, ಹನುಮನಮಟ್ಟಿ ಕೃಷಿ ಮಹಾವಿದ್ಯಾಲಯದಲ್ಲಿ ಸಹಾಯಕ ಅಧ್ಯಾಪಕ 2019 ರಿಂದ ನೀನು ನನಗೆ ಇಷ್ಟ, ನನಗೆ ಸಹಕರಿಸಿದರೆ ನನ್ನ ವಿಷಯದ ಪರೀಕ್ಷೆಯಲ್ಲಿ ಪಾಸ್ ಮಾಡುತ್ತೇನೆ. ಇಲ್ಲದಿದ್ದರೆ ಫೇಲ್ ಮಾಡುತ್ತೇನೆ ಎಂದು ಬೆದರಿಸಿ ಚೇಂಬರ್ ನಲ್ಲಿಯೇ ಅತ್ಯಾಚಾರ ಎಸಗಿರುವುದಾಗಿ ವಿದ್ಯಾರ್ಥಿನಿ ದೂರು ನೀಡಿದ್ದಾಳೆ.

ಕಾಲೇಜಿನ ಚೇಂಬರ್ ನಲ್ಲಿ ಬೆದರಿಸಿ ಅತ್ಯಾಚಾರ ಎಸಗಿದ್ದಲ್ಲದೇ, ಲಾಕ್ಡೌನ್ ಸಂದರ್ಭದಲ್ಲಿ ಹಾವೇರಿಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾನೆ ಎಂದು ವಿದ್ಯಾರ್ಥಿನಿ ಆರೋಪಿಸಿ ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡ ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ ಎನ್ನಲಾಗಿದೆ.


Spread the love

About Laxminews 24x7

Check Also

ನಾಲ್ಕು ರಾಜ್ಯಗಳ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಪಟ್ಟಿ ಪ್ರಕಟ

Spread the loveಭಾರತೀಯ ಜನತಾ ಪಾರ್ಟಿ (ಬಿಜೆಪಿ) ಗೋವಾ ಸೇರಿದಂತೆ ನಾಲ್ಕು ರಾಜ್ಯಗಳ ಐದು ವಿಧಾನಸಭಾ ಕ್ಷೇತ್ರಗಳಿಗೆ ನಡೆಯಲಿರುವ ಉಪಚುನಾವಣೆಗಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ