Breaking News

ಸಾಹುಕಾರ್ ಸಿಡಿ ಪ್ರಕರಣ; ಪತ್ರಕರ್ತನ ವಿಡಿಯೋ ಮೂಲ ಪತ್ತೆ ಹಚ್ಚಿದ ಎಸ್‌ಐಟಿ

Spread the love

ಬೆಂಗಳೂರು: ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣದ ಕಿಂಗ್ ಪಿನ್ ಎಂದೇ ಹೇಳಲಾಗುತ್ತಿರುವ ಮಾಜಿ ಪತ್ರಕರ್ತ ನರೇಶ್ ನಿನ್ನೆ ಬಿಡುಗಡೆ ಮಾಡಿದ್ದ ವಿಡಿಯೋ ಹೇಳಿಕೆಯ ಮೂಲ ಇದೀಗ ಪತ್ತೆಯಾಗಿದೆ.

ನಿನ್ನೆ ನರೇಶ್, ಸಿಡಿ ಪ್ರಕರಣಕ್ಕೂ ತನಗೂ ಯಾವುದೇ ಸಂಬಂಧವಿಲ್ಲ. ಪ್ರಕರಣದಲ್ಲಿ ಅನಗತ್ಯವಾಗಿ ನನ್ನನ್ನು ಸಿಲುಕಿಸುವ ಯತ್ನ ನಡೆದಿದೆ ಎಂದು 8 ನಿಮಿಷಗಳ ವಿಡಿಯೋ ಬಿಡುಗಡೆ ಮಾಡಿದ್ದರು. ಅಲ್ಲದೇ ರಮೇಶ್ ಜಾರಕಿಹೊಳಿ ಮಾಡಬಾರದ ತಪ್ಪು ಮಾಡಿದ್ದಾರೆ. ಯುವತಿಗೆ ಅನ್ಯಾಯವಾಗಿದೆ ಎಂದು ಆರೋಪಿಸಿದ್ದರು. ಇದೀಗ ಈ ವಿಡಿಯೋ ಮೂಲವನ್ನು ಎಸ್‌ಐಟಿ ಪತ್ತೆ ಮಾಡಿದೆ.

ನರೇಶ್ ಬಿಡುಗಡೆ ಮಾಡಿರುವ ವಿಡಿಯೋ ದೆಹಲಿಯಿಂದ ಅಪ್ ಲೋಡ್ ಆಗಿದೆ ಎಂದು ಎಸ್‌ಐಟಿ ಅಧಿಕಾರಿಗಳು ಪತ್ತೆ ಮಾಡಿದ್ದಾರೆ. ಅಲ್ಲದೇ ಸಿಡಿ ಲೇಡಿಯ ಮೊಬೈಲ್ ಕೂಡ ದೆಹಲಿಯಲ್ಲಿ ನಿನ್ನೆ ಮಧ್ಯಾಹ್ನ ಆನ್ ಆಗಿ ಮತ್ತೆ ಆಫ್ ಆಗಿದೆ ಎಂಬ ವಿಚಾರ ಕೂಡ ಇದೀಗ ಬಯಲಾಗಿದೆ. ಇದೇ ವೇಳೆ ಎಸ್‌ಐಟಿ ಅಧಿಕಾರಿಗಳು ಆರೋಪಿಗಳಿಗಾಗಿ ಹುಡುಕಾಟ ಮುಂದುವರೆಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ವಿದ್ಯುತ್‌ ಉತ್ಪಾದನೆ ಶೇ. 5ರಷ್ಟು ಹೆಚ್ಚಳ : ಬೇಡಿಕೆ ಮೀರಿದ ಉತ್ಪಾದನೆ ನೆರೆರಾಜ್ಯಗಳಿಗೆ ಮಾರಾಟ, ರೈತರಿಗೂ ಲಾಭ

Spread the loveಬೆಂಗಳೂರು : ರಾಜ್ಯದಲ್ಲಿ ವಾರ್ಷಿಕ ವಿದ್ಯುತ್‌ ಉತ್ಪಾದನೆಯು ಶೇ.5ರಷ್ಟು ಹೆಚ್ಚಳವಾಗಿದ್ದು, ಈ ಬಾರಿ ಬೇಸಿಗೆಯಲ್ಲಿ ವಿದ್ಯುತ್‌ಗೆ ಬರವಿಲ್ಲ. …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ