Breaking News

ಸ್ವಂತ ಮನೆ ಹೊಂದುವ ಕನಸು ಕಂಡವರಿಗೆ ಭರ್ಜರಿ ಸಿಹಿ ಸುದ್ದಿ: 3.5 ಲಕ್ಷ ಸಬ್ಸಿಡಿ, ಸುಲಭ ದರದಲ್ಲಿ ಸಾಲ

Spread the love

ಬೆಂಗಳೂರು: ರಾಜ್ಯದಲ್ಲಿ 3.24 ಲಕ್ಷ ಮನೆಗಳನ್ನು ನಿರ್ಮಿಸುವ ಗುರಿ ಹೊಂದಲಾಗಿದೆ ಎಂದು ವಸತಿ ಸಚಿವ ವಿ. ಸೋಮಣ್ಣ ತಿಳಿಸಿದ್ದಾರೆ.

ಬಡವರಿಗೆ ವಸತಿಗೆ ಶೇಕಡ 6 ರಷ್ಟು ಬಡ್ಡಿದರದಲ್ಲಿ ಸಾಲ ನೀಡಲಾಗುವುದು. ಇದನ್ನು ಶೇಕಡ 5 ಕ್ಕೆ ಇಳಿಸಲು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು. ಕರ್ನಾಟಕ ಗೃಹಮಂಡಳಿ ಮತ್ತು ರಾಜೀವ್ ಗಾಂಧಿ ಗೃಹ ನಿರ್ಮಾಣ ಮಂಡಳಿ ರಾಜ್ಯದಲ್ಲಿ ಪ್ರಧಾನಮಂತ್ರಿ ಆವಾಸ್ ಯೋಜನೆಯ ಫಲಾನುಭವಿಗಳಿಗೆ ವಸತಿ ಕಲ್ಪಿಸಲಾಗುವುದು. ಬ್ಯಾಂಕ್ ಮೂಲಕ ಶೇ. 6 ಬಡ್ಡಿದರದಲ್ಲಿ 2.25 ಲಕ್ಷ ರೂ ಸಾಲ ನೀಡಲಾಗುವುದು ಎಂದು ಹೇಳಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ವಿವಿಧ ಬ್ಯಾಂಕ್ ಹಿರಿಯ ಅಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿ, ಬಡವರಿಗೆ ಸೂರು ಕಲ್ಪಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ. ಎಸ್ಸಿಎಸ್ಟಿ ವರ್ಗದವರಿಗೆ 3.5 ಲಕ್ಷ ರೂ., ಇತರೆ ವರ್ಗದವರಿಗೆ 2 ಲಕ್ಷರೂ ಗಳನ್ನು ಸರ್ಕಾರ ಸಬ್ಸಿಡಿ ರೂಪದಲ್ಲಿ ನೀಡಲಿದ್ದು, ಉಳಿದ 2.25 ಲಕ್ಷ ರೂಪಾಯಿಯನ್ನು ಬ್ಯಾಂಕುಗಳಿಂದ ಸಾಲ ಕೊಡಿಸಲಾಗುವುದು ಎಂದು ಹೇಳಿದ್ದಾರೆ


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ