ಮಂಡ್ಯ: ಆಧುನಿಕ ಭಗೀರಥ ಎಂದೇ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಕಾಮೇಗೌಡರಿಗೆ ಕೊರೊನಾ ವೈರಸ್ ಬಂದಿದೆ.
ಸ್ವತಃ ಖರ್ಚಿನಿಂದ ಕೆರೆಗಳನ್ನು ನಿರ್ಮಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಇಂದು ಧೃಡವಾಗಿದೆ.ಕಾಮೇಗೌಡರು ಕಳೆದ 15 ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆರಂಭದಲ್ಲಿ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
ಆದರೆ ಗುಣಮುಖವಾಗದ ಕಾರಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕಾಮೇಗೌಡ ಅವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಸದ್ಯ ಕಾಮೇಗೌಡ ಅವರು ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Laxmi News 24×7