Breaking News

ಭಗೀರಥ ಕಾಮೇಗೌಡರಿಗೆ ಕೊರೊನಾ ಪಾಸಿಟಿವ್……………

Spread the love

ಮಂಡ್ಯ: ಆಧುನಿಕ ಭಗೀರಥ ಎಂದೇ ಕರೆಸಿಕೊಳ್ಳುವ ಮಂಡ್ಯ ಜಿಲ್ಲೆಯ ಕಾಮೇಗೌಡರಿಗೆ ಕೊರೊನಾ ವೈರಸ್ ಬಂದಿದೆ.

ಸ್ವತಃ ಖರ್ಚಿನಿಂದ ಕೆರೆಗಳನ್ನು ನಿರ್ಮಿಸಿ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರಿಂದ ಪ್ರಶಂಸೆ ಪಡೆದಿದ್ದ ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲೂಕಿನ ದಾಸನದೊಡ್ಡಿ ಗ್ರಾಮದ ಕಾಮೇಗೌಡ ಅವರಿಗೆ ಕೊರೊನಾ ಪಾಸಿಟಿವ್ ಇಂದು ಧೃಡವಾಗಿದೆ.ಕಾಮೇಗೌಡರು ಕಳೆದ 15 ದಿನಗಳಿಂದ ಕಾಲು ನೋವಿನಿಂದ ಬಳಲುತ್ತಿದ್ದರು. ಹೀಗಾಗಿ ಆರಂಭದಲ್ಲಿ ಮಳವಳ್ಳಿ ತಾಲೂಕು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಆದರೆ ಗುಣಮುಖವಾಗದ ಕಾರಣ ಮಂಡ್ಯದ ಮಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಈ ವೇಳೆ ಕಾಮೇಗೌಡ ಅವರಿಗೆ ಸೋಂಕು ತಗುಲಿರುವ ಸಾಧ್ಯತೆ ಇದೆ. ಸದ್ಯ ಕಾಮೇಗೌಡ ಅವರು ಮಂಡ್ಯದ ಕೋವಿಡ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


Spread the love

About Laxminews 24x7

Check Also

ಕೋಳಿ ಫಾರಂನಲ್ಲಿ ಇತ್ತು ಅಸಲಿ ಗನ್ ; ಕಳ್ಳ-ಪೊಲೀಸ್ ಆಟ ಆಡಲು ಹೋಗಿ 3 ವರ್ಷದ ಮಗು ಗುಂಡೇಟಿಗೆ ಬಲಿ.

Spread the loveಮಂಡ್ಯ : ಬಾಲಕನೊಬ್ಬ ಆಟವಾಡುವಾಗ ಆಕಸ್ಮಿಕವಾಗಿ ತನ್ನ 3 ವರ್ಷದ ತಮ್ಮನ ಮೇಲೆ ಗುಂಡು ಹಾರಿಸಿದ ಪರಿಣಾಮ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ