Breaking News

ಹರಿದ ಜೀನ್ಸ್’ ಸಿಎಂ ತಿರತ್ ಹೇಳಿಕೆಗೆ ಬಿಗ್‍ಬಿ ಮೊಮ್ಮಗಳ ಖಡಕ್ ತಿರುಗೇಟು

Spread the love

ಮುಂಬೈ : ಹರಿದ ಜೀನ್ಸ್ ಪ್ಯಾಂಟ್ ಧರಿಸಬೇಡಿ ಎಂದಿದ್ದ ಉತ್ತರಾಖಂಡ್​ ಮುಖ್ಯಮಂತ್ರಿ ತಿರತ್​ ಸಿಂಗ್​ ರಾವತ್​ ಅವರಿಗೆ ಬಾಲಿವುಡ್ ಹಿರಿಯ ನಟ ಅಮಿತಾಭ್​ ಬಚ್ಚನ್​ ಅವರ ಮೊಮ್ಮಗಳು ನವ್ಯಾ ನವೇಲಿ ನಂದಾ ಅವರು ತಿರುಗೇಟು ನೀಡಿದ್ದಾರೆ.

ಇತ್ತೀಚೆಗೆ ಉತ್ತರಾಖಂಡ್ ಸಿಎಂ ತಿರತ್​ ಸಿಂಗ್​ ರಾವತ್​ ಅವರು ‘ಯುವತಿಯರು ಶ್ರೀಮಂತರ ಮಕ್ಕಳಂತೆ ಕಾಣಲು ಹರಿದ ಜೀನ್ಸ್​ ಧರಿಸಿ ಮೊಣಕಾಲು ತೋರಿಸುತ್ತಾರೆ. ಇದು ಭಾರತೀಯ ಸಂಸ್ಕೃತಿಗೆ ವಿರುದ್ಧವಾದದ್ದು. ಪಾಶ್ಚಾತ್ಯರು ನಮ್ಮ ಸಂಸ್ಕೃತಿ, ಆಚಾರ ವಿಚಾರಗಳನ್ನ ಗೌರವಿಸಿ ಅದನ್ನು ಶ್ರದ್ಧೆಯಿಂದ ಅನುಸರಿಸುತ್ತಿರುವಾಗ ನಾವು ಪಾಶ್ಚಾತ್ಯರನ್ನು ಅನುಸರಿಸುತ್ತಿದ್ದೇನೆ ಎಂದಿದ್ದರು.

ಮುಖ್ಯಮಂತ್ರಿಯವರ ಈ ಹೇಳಿಕೆ ಪರ-ವಿರೋಧದ ಚರ್ಚೆಗೆ ಎಡೆ ಮಾಡಿಕೊಟ್ಟಿದೆ. ಸಾಮಾಜಿಕ ಜಾಲತಾಣಗಳಲ್ಲಿ ತಿರತ್ ಅವರ ಅಭಿಪ್ರಾಯವನ್ನು ಕೆಲವರು ಬೆಂಬಲಿಸಿದ್ದರೆ, ಮತ್ತೆ ಕೆಲವರು ತೀಕ್ಷ್ಣವಾಗಿ ಖಂಡಿಸಿದ್ದಾರೆ.

ಇದೀಗ ಅಮಿತಾಭ್​ ಬಚ್ಚನ್​ ಮೊಮ್ಮಗಳು ನವ್ಯಾ ಕೂಡ ತಿರತ್​ ಸಿಂಗ್​ ರಾವತ್​ ಮಾತಿಗೆ ಆಕ್ರೋಶ ವ್ಯಕ್ತಪಡಿಸಿದ್ದು, ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಗಳಲ್ಲಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ‘ನಮ್ಮ ಬಟ್ಟೆಯನ್ನು ಬದಲಿಸುವುದಕ್ಕಿಂತ ಮುಂಚೆ ನೀವು ನಿಮ್ಮ ಮನಸ್ಥಿತಿಯನ್ನು ಬದಲಾಯಿಸಿಕೊಳ್ಳಿ’ ಎಂದು ಮೊನಚಾದ ಮಾತುಗಳಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಮುಖ್ಯಮಂತ್ರಿಗಳು ಇಂಥ ಹೇಳಿಕೆಗಳ ಮೂಲಕ ಸಮಾಜಕ್ಕೆ ಸಂದೇಶ ರವಾನಿಸುವುದು ಅಘಾತಕಾರಿ ಅಂಶ ಎಂದು ನವ್ಯಾ ಹೇಳಿಕೊಂಡಿದ್ದಾರೆ. ಇನ್ನು ಪಾಶ್ಚಾತ್ಯ ಶೈಲಿಯ ವೇಷಭೂಷಣದ ಕುರಿತು ಚರ್ಚೆ, ಟೀಕೆಗಳು ಈ ಹಿಂದಿನಿಂದಲೂ ಅನುಸರಿಸಿಕೊಂಡು ಬರಲಾಗಿದೆ. ಇತ್ತೀಚಿಗಷ್ಟೆ ಉತ್ತರ ಪ್ರದೇಶದ ಹಳ್ಳಿಯೊಂದರಲ್ಲಿ ಹೆಣ್ಣು ಮಕ್ಕಳು ಜೀನ್ಸ್ ಪ್ಯಾಂಟ್ ಧರಿಸದಂತೆ ನಿರ್ಬಂಧ ಹೇರಿ ಅಲ್ಲಿಯ ಸ್ಥಳೀಯ ಪಂಚಾಯತ್ ಕಟ್ಟುನಿಟ್ಟಿನ ಆದೇಶ ಹೊರಡಿಸಿತ್ತು.


Spread the love

About Laxminews 24x7

Check Also

ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ

Spread the love ಸಂಬಂಧಿಕರ‌ ಹುಡಗನ ಪ್ರೀತಿಸಿದ್ದಕ್ಕೆ ಹೆತ್ತ ಮಗಳನ್ನೇ ಕೊಂದ ತಂದೆ ತುಮಕೂರು : ಪ್ರೀತಿ ಬಲೆಗೆ ಬಿದ್ದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ