Breaking News
Home / Uncategorized / ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;

ಕೋವಿಡ್; ಚಿತ್ರಮಂದಿರ, ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಅವಕಾಶ;

Spread the love

ಮುಂಬೈ:ಕೋವಿಡ್ 19 ಸೋಂಕು ಪ್ರಕರಣ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಾರ್ಚ್ 31ರವರೆಗೆ ಎಲ್ಲಾ ಚಿತ್ರಮಂದಿರಗಳು, ಆಡಿಟೋರಿಯಂ ಹಾಗೂ ಕಚೇರಿಗಳಲ್ಲಿ ಶೇ.50ರಷ್ಟು ಮಾತ್ರ ಜನಸಂಖ್ಯೆಗೆ ಸೀಮಿತಗೊಳಿಸಿ ಮಹಾರಾಷ್ಟ್ರ ಸರ್ಕಾರ ಶುಕ್ರವಾರ(ಮಾರ್ಚ್ 31) ಆದೇಶ ಹೊರಡಿಸಿದೆ.

ಕಳೆದ 24ಗಂಟೆಯಲ್ಲಿ ಮಹಾರಾಷ್ಟ್ರದಲ್ಲಿ 25,833 ಕೋವಿಡ್ 19 ಸೋಂಕು ಪ್ರಕರಣ ವರದಿಯಾಗಿದೆ. ಇದು ಕಳೆದ ವರ್ಷ ಕೋವಿಡ್ ಸೋಂಕು ಆರಂಭವಾದ ನಂತರ ಗರಿಷ್ಠ ಪ್ರಮಾಣದಲ್ಲಿ ಪತ್ತೆಯಾದ ಪ್ರಕರಣವಾಗಿದೆ.

ಒಂದು ವೇಳೆ ಮಾಸ್ಕ್ ಧರಿಸದೇ ಎಲ್ಲೆಂದರಲ್ಲಿ ಓಡಾಡುತ್ತಿದ್ದರೆ ಜನರು ಮತ್ತೊಂದು ಕಠಿಣ ಲಾಕ್ ಡೌನ್ ಪರಿಸ್ಥಿತಿಯನ್ನು ಎದುರಿಸಬೇಕಾಗುತ್ತದೆ ಎಂದು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಎಚ್ಚರಿಸಿದ ನಂತರ ಚಿತ್ರಮಂದಿರದ ಪ್ರೇಕ್ಷಕರು ಮತ್ತು ಕಚೇರಿಗಳಲ್ಲಿ ಶೇ.50ರಷ್ಟು ಪ್ರಮಾಣದಲ್ಲಿ ಸಿಬ್ಬಂದಿಗಳಿಗೆ ಅವಕಾಶ ಕಲ್ಪಿಸಿರುವುದಾಗಿ ಆದೇಶದಲ್ಲಿ ತಿಳಿಸಿದೆ.

ಆರೋಗ್ಯ ಮತ್ತು ಇತರ ತುರ್ತು ಸೇವೆಯನ್ನು ಹೊರತುಪಡಿಸಿ ಬೇರೆ ಎಲ್ಲಾ ಖಾಸಗಿ ಸಂಸ್ಥೆಗಳು ಶೇ.50ರ ಪ್ರಮಾಣದಲ್ಲಿ ಕಾರ್ಯನಿರ್ವಹಿಸಬೇಕೆಂದು ಆದೇಶದಲ್ಲಿ ಸ್ಪಷ್ಟಪಡಿಸಿದೆ.


Spread the love

About Laxminews 24x7

Check Also

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ