ಸಾಮಾಜಿಕ ತಾಣಗಳು ಎಷ್ಟು ಅನುಕೂಲವೋ ಅಷ್ಟೇ ಮಾರಕವೆಂಬುದು ಹಲವು ಸಂದರ್ಭಗಳಲ್ಲಿ ಸಾಬೀತಾಗಿದ್ದು, ಇದಕ್ಕೆ ಮತ್ತೊಂದು ಪ್ರಕರಣ ಸೇರ್ಪಡೆಯಾಗಿದೆ. ವಾಟ್ಸಾಪ್ ಮೂಲಕ ಪರಿಚಿತನಾಗಿದ್ದ ಯುವಕನೊಬ್ಬ ತನ್ನನ್ನು ಪ್ರೀತಿಸುವಂತೆ ಯುವತಿಗೆ ಗಂಟು ಬಿದ್ದ ಹಿನ್ನೆಲೆಯಲ್ಲಿ ಬೇಸತ್ತ ಆಕೆ ಪ್ರಾಣವನ್ನೇ ಕಳೆದುಕೊಂಡಿದ್ದಾಳೆ.
ಶಿವಮೊಗ್ಗ ಜಿಲ್ಲೆ ಹೊಸನಗರ ತಾಲೂಕಿನ ಕೆಂಚನಾಲ ಕಲ್ಯಾಣಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಿಪ್ಪನ್ ಪೇಟೆ ಪಟ್ಟಣದ ಸರ್ಕಾರಿ ಪದವಿ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಕಾಂ ವ್ಯಾಸಂಗ ಮಾಡುತ್ತಿದ್ದ 19 ವರ್ಷದ ಶ್ರೇಯಾ ಕಳೆನಾಶಕ ಸೇವಿಸಿ ಆತ್ಮಹತ್ಯೆಗೆ ಶರಣಾದ ಯುವತಿ.
ಈಕೆಗೆ ಭಟ್ಕಳ ಮೂಲದ ಓಂಕಾರ್ ಭಟ್ ಎಂಬಾತ ವಾಟ್ಸಾಪ್ ಮೂಲಕ ಪರಿಚಿತನಾಗಿದ್ದು, ಪ್ರೀತಿಸುವಂತೆ ಪೀಡಿಸುತ್ತಿದ್ದ ಎನ್ನಲಾಗಿದೆ. ಇದರಿಂದ ಕುಟುಂಬದ ಮರ್ಯಾದೆಗೆ ಅಂಜಿ ಶ್ರೇಯಾ ಆತ್ಮಹತ್ಯೆಗೆ ಶರಣಾಗಿದ್ದಾಳೆ. ಇದೀಗ ಆರೋಪಿಯನ್ನು ರಿಪ್ಪನ್ ಪೇಟೆ ಪೊಲೀಸರು ಬಂಧಿಸಿದ್ದಾರೆ.