Home / ರಾಜ್ಯ / Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ

Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ Covid-19 Karnataka Updates: ಸತತ ನಾಲ್ಕನೇ ದಿನ ಸಾವಿರ ದಾಟಿದ ಹೊಸ ಪ್ರಕರಣ

Spread the love

ಬೆಂಗಳೂರು: ರಾಜ್ಯದಲ್ಲಿ ಸತತ ನಾಲ್ಕನೇ ದಿನ ಹೊಸ ಪ್ರಕರಣಗಳ ಸಂಖ್ಯೆ ಸಾವಿರದ ಗಡಿ ದಾಟಿದೆ. ಶುಕ್ರವಾರ 1,587 ಪ್ರಕರಣಗಳು ದೃಢಪಟ್ಟಿವೆ. ಮೂರುವರೆ ತಿಂಗಳಲ್ಲಿ 24 ಗಂಟೆಗಳ ಅವಧಿಯಲ್ಲಿ ವರದಿಯಾದ ಗರಿಷ್ಠ ಪ್ರಕರಣಗಳು ಇವಾಗಿವೆ. ಈವರೆಗೆ ಸೋಂಕಿತರಾದವರ ಸಂಖ್ಯೆ 9.66 ಲಕ್ಷ ದಾಟಿದೆ.

ಹೊಸ ಪ್ರಕರಣಗಳು ಏರುಗತಿ ಪಡೆದ ಕಾರಣ ಸಕ್ರಿಯ ಪ್ರಕರಣಗಳು ಮತ್ತಷ್ಟು ಹೆಚ್ಚಳವಾಗಿದ್ದು, 12,067 ಮಂದಿ ಆಸ್ಪತ್ರೆ ಸೇರಿದಂತೆ ವಿವಿಧೆಡೆ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ. ಅವರಲ್ಲಿ 131 ಮಂದಿ ತೀವ್ರ ನಿಗಾ ಘಟಕದಲ್ಲಿ ಇದ್ದಾರೆ.

ಸೋಂಕಿತರಲ್ಲಿ ಬೆಂಗಳೂರಿನಲ್ಲಿ 6 ಮಂದಿ ಹಾಗೂ ಮೈಸೂರಿನಲ್ಲಿ 2, ಬೀದರ್‌ ಮತ್ತು ಧಾರವಾಡದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ಈವರೆಗೆ ಸಾವಿಗೀಡಾದವರ ಸಂಖ್ಯೆ 12,425ಕ್ಕೆ ಏರಿಕೆಯಾಗಿದೆ. ಕೋವಿಡ್ ಪೀಡಿತರಲ್ಲಿ ಮತ್ತೆ 869 ಮಂದಿ ಚೇತರಿಸಿಕೊಂಡಿದ್ದಾರೆ. ಈವರೆಗೆ ಗುಣಮುಖರಾದವರ ಸಂಖ್ಯೆ 9.42 ಲಕ್ಷ ದಾಟಿದೆ.

ಬಾಗಲಕೋಟೆ ಹೊರತುಪಡಿಸಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಹೊಸದಾಗಿ ಪ್ರಕರಣಗಳು ವರದಿಯಾಗಿವೆ. ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ ಏರುಗತಿ ಪಡೆದುಕೊಂಡಿದೆ. ಹೊಸದಾಗಿ 1,037 ಪ್ರಕರಣಗಳು ವರದಿಯಾಗಿದ್ದು, ಈವರೆಗೆ ಸೋಂಕಿತರ ಸಂಖ್ಯೆ 4.15 ಲಕ್ಷ ದಾಟಿದೆ. ಕಲಬುರ್ಗಿ 61, ತುಮಕೂರು 50, ಮೈಸೂರು 49, ದಕ್ಷಿಣ ಕನ್ನಡ 47, ಬೀದರ್ 40, ಬೆಳಗಾವಿ 37, ಹಾಸನ ಜಿಲ್ಲೆಯಲ್ಲಿ 35 ಪ್ರಕರಣಗಳು ಹೊಸದಾಗಿ ವರದಿಯಾಗಿವೆ.


Spread the love

About Laxminews 24x7

Check Also

ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ ನಿರಾಣಿ…!!

Spread the love ಮೋದಿ ಆಡಳಿತದಲ್ಲಿ ಆರ್ಥಿಕವಾಗಿ ಜಪಾನ್- ಇಂಗ್ಲೆಂಡ್‌ ಕಿಂತ ಮುಂದೆ ಭಾರತ ಇದೆ: ಮಾಜಿ ಸಚಿವ ಮುರಗೇಶ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ