ಬೆಂಗಳೂರು : ರಾಜ್ಯ ರಾಜಕೀಯದಲ್ಲಿ ಭಾರಿ ಸದ್ದು ಮಾಡುತ್ತಿರುವ ಸಿಡಿ ಪ್ರಕರಣದ ಬಳಿಕ ರಾಜ್ಯ ಸರ್ಕಾರಕ್ಕೆ ಹೊಸ ಚೈತನ್ಯ ತುಂಬಲು ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಾಯಿಸಲು ಸಿಎಂ ಬಿ.ಎಸ್. ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ.
ಬೆಳಗಾವಿ ಲೋಕಸಭೆ, ಮಸ್ಕಿ, ವಿಧಾನಸಭಾ ಸ್ಥಾನಗಳಿಗೆ ಈಗಾಗಲೇ ಉಪಚುನಾವಣೆಗೆ ದಿನಾಂಕ ಘೋಷಣೆಯಾಗಿದ್ದು, ಅದಕ್ಕೂ ಮೊದಲೇ ಸಿಎಂ ಬಿ.ಎಸ್. ಯಡಿಯೂರಪ್ಪ ಜಿಲ್ಲಾ ಉಸ್ತುವಾರಿ ಸಚಿವರನ್ನು ಬದಲಿಸಲು ನಿರ್ಧರಿಸಿದ್ದಾರೆ ಎಂದು ಹೇಳಲಾಗುತ್ತಿದೆ.
ಸಿಡಿ ಪ್ರಕರಣದ ಬಳಿಕ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದು, ಬೆಳಗಾವಿ ಜಿಲ್ಲಾ ಉಸ್ತುವಾರಿ ತೆರವಾಗಿದ್ದು, ಹೀಗಾಗಿ ತುರ್ತು ನೇಮಕ ಮಾಡುವ ಸಂಬಂಧ ಸಿಎಂ ಬಿ.ಎಸ್. ಯಡಿಯೂರಪ್ಪ ನಿರ್ಧರಿಸಿದ್ದಾರೆ ಎನ್ನಲಾಗಿದ್ದು, ಬೆಳಗಾವಿಗೆ ಸಚಿವ ಉಮೇಶ್ ಕತ್ತಿ ಅವರನ್ನು ನೇಮಕದ ಜೊತೆಗೆ ಹಲವು ಸಚಿವರ ಜಿಲ್ಲಾ ಉಸ್ತುವಾರಿ ಹೊಣೆಗಾರಿಕೆಯನ್ನು ಬದಲಿಸಲು ಯಡಿಯೂರಪ್ಪ ಚಿಂತನೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.