ಬೆಂಗಳೂರು: ರಾಜ್ಯದಲ್ಲಿ ಮತ್ತೆ ಉಪ ಚುನಾವಣೆಗಳ ಕಹಳೆ ಮೊಳಗಿದೆ. ಈಗಾಗಲೇ ಮಸ್ಕಿ ಉಪಚುನಾವಣೆಗೆ ಕಾಂಗ್ರೆಸ್ ಹಾಗೂ ಬಿಜೆಪಿ ಅಭ್ಯರ್ಥಿಗಳು ಅಂತಿಮವಾಗಿದ್ದು, ಬಿರುಸಿನ ಪ್ರಚಾರ ನಡೆದಿದೆ.
ಉಪಚುನಾವಣೆಯಲ್ಲಿ ಗೆಲುವಿಗಾಗಿ ಉಭಯ ಪಕ್ಷಗಳು ಜಿದ್ದಾಜಿದ್ದಿನ ಪೈಪೋಟಿ ನಡೆಸಿವೆ. ಇಂದು ರಾಯಚೂರಿನ ಮಸ್ಕಿಯಲ್ಲಿ ಬೃಹತ್ ಸಮಾವೇಶ ನಡೆಸಲಿದೆ. ಸಮಾವೇಶದಲ್ಲಿ ಸಿಎಂ ಯಡಿಯೂರಪ್ಪ ಭಾಗವಹಿಸಿ ಪ್ರತಾಪಗೌಡ ಪಾಟೀಲ ಪರವಾಗಿ ಮತಯಾಚನೆ ಮಾಡಲಿದ್ದಾರೆ.
ಇತ್ತ ಬೆಳಗಾವಿ ಲೋಕಸಭೆ, ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭೆ ಉಪಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಇಂದು ರಾಜ್ಯ ಬಿಜೆಪಿ ಕೋರ್ ಕಮಿಟಿಯಿಂದ ಸಭೆ ನಡಸಲಿದೆ. ಈ ಸಭೆಯಲ್ಲಿ ಸಂಭಾವ್ಯ ಅಭ್ಯರ್ಥಿಗಳನ್ನೂ ವರಿಷ್ಠರಿಗೆ ಶಿಫಾರಸ್ಸು ಮಾಡುವ ನಿರೀಕ್ಷೆ ಇದೆ.
ಬೆಳಗ್ಗೆ 8.30ಕ್ಕೆ ಬಿಜೆಪಿ ಕಚೇರಿಯಲ್ಲಿ ಕೋರ್ ಕಮಿಟಿ ಸಭೆ ನಡೆಯಲಿದ್ದು, ಮೂರು ಕ್ಷೇತ್ರಗಳ ಪೈಕಿ ಮಸ್ಕಿ ಕ್ಷೇತ್ರದ ಅಭ್ಯರ್ಥಿ ಆಯ್ಕೆ ಅಂತಿಮಗೊಂಡಿದ್ದು, ಸಭೆಯಲ್ಲಿ ಬಸವಕಲ್ಯಾಣ ಹಾಗೂ ಬೆಳಗಾವಿ ಲೋಕಸಭೆಗೆ ಅಭ್ಯರ್ಥಿಗಳ ಆಯ್ಕೆ ಮಾಡುವ ಬಗ್ಗೆ ಚರ್ಚೆ ನಡೆಯಲಿದೆ. ಇನ್ನು ಕಾಂಗ್ರೆಸ್ ಹಿರಿಯ ಮುಖಂಡರು ಕೂಡ ಬೆಳಿಗ್ಗೆ 11 ಗಂಟೆಗೆ ಕೆಪಿಸಿಸಿ ಕಚೇರಿಯಲ್ಲಿ ನಡೆಸಲಿದ್ದಾರೆ.
Laxmi News 24×7