Breaking News

ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೆಸರು ಅಂತಿಮ

Spread the love

ಬೆಂಗಳೂರು – ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಮಾಜಿ ಸಚಿವ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಹೆಸರು ಅಂತಿಮಗೊಳಿಸಲಾಗಿದೆ.

ಬೆಂಗಳೂರಿನಲ್ಲಿ ಇಂದು ನಡೆದ ಕಾಂಗ್ರೆಸ್ ಪ್ರಮುಖರ ಸಭೆಯಲ್ಲಿ ಈ ಕುರಿತು ಒಮ್ಮತ ಮೂಡಿಬಂದಿದ್ದು, ಹೈಕಮಾಂಡ್ ಗೆ ಹೆಸರು ಕಳಿಸಲಾಗಿದೆ. ಸೋಮವಾರ ಅಧಿಕೃತವಾಗಿ ಘೋಷಣೆಯಾಗಬಹುದು.

ಏಪ್ರಿಲ್ 17ರಂದು ಚುನಾವಣೆ ನಡೆಯಲಿದ್ದು, ಇದೇ 23ರಿಂದ ನಾಮಪತ್ರ ಸಲ್ಲಿಕೆ ಕಾರ್ಯ ನಡೆಯಲಿದೆ.

ಸತೀಶ್ ಜಾರಕಿಹೊಳಿ ಯಮಕನಮರಡಿ ಕ್ಷೇತ್ರದ ಹಾಲಿ ಶಾಸಕರು. ಸಚಿವರಾಗಿ ಕೂಡ ಅನುಭವ ಹೊಂದಿದ್ದಾರೆ. ಜಿಲ್ಲೆಯಲ್ಲಿ ಸಾಕಷ್ಟು ಪರಿಚಿತರು. ಹಾಗಾಗಿ ಅವರನ್ನು ಕಣಕ್ಕಿಳಿಸಿದರೆ ಕಾಂಗ್ರೆಸ್ಗೆ ಗೆಲ್ಲುವ ಅವಕಾಶ ಹೆಚ್ಚಿದೆ ಎನ್ನುವ ಅಭಿಪ್ರಾಯ ಎಲ್ಲರಿಂದ ಬಂದ ಹಿನ್ನೆಲೆಯಲ್ಲಿ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಗೊತ್ತಾಗಿದೆ.

ಪಕ್ಷದ ರಾಷ್ಟ್ರೀಯ ಮುಖಂಡರು ಅಧಿಕೃತವಾಗಿ ಸತೀಶ್ ಜಾರಕಿಹೊಳಿ ಹೆಸರನ್ನು ಘೋಷಿಸಬೇಕಿದೆ.


Spread the love

About Laxminews 24x7

Check Also

ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು

Spread the love ಬೆಳಗಾವಿ: ಡಾ.ಬೆಟಗೇರಿ ಕೃಷ್ಣ್ಣಶರ್ಮರು ಮಾತೃ ಹೃದಯದ ಆಶ್ರಯದಲ್ಲಿ ಬೆಳೆದವರು. ಹೀಗಾಗಿ, ಅವರ ಕೃತಿಗಳಲ್ಲಿ ಸ್ತ್ರೀತ್ವದ ಅಂಶಗಳು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ