ರಾಯಚೂರು: ಉಪಚುನಾವಣಾ ಅಖಾಡ ದಿನದಿಂದ ದಿನಕ್ಕೆ ರಂಗೇರುತ್ತಿದ್ದು, ರಾಜಕೀಯ ಪಕ್ಶಗಳು ಬಿರುಸಿನ ಪ್ರಚಾರ ಆರಂಭಿಸಿವೆ. ಈ ನಡುವೆ ರಮೇಶ್ ಜಾರಕಿಹೊಳಿ ಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಸಿಎಂ ಬಿ.ಎಸ್.ಯಡಿಯೂರಪ್ಪ ತಿಳಿಸಿದ್ದಾರೆ.
ರಾಯಚೂರು ಜಿಲ್ಲೆ ಸಿಂಧನೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಶೀಘ್ರದಲ್ಲಿ ಅಭ್ಯರ್ಥಿ ಘೋಷಿಸಲಾಗುತ್ತದೆ. ಮೂರು ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಖಚಿತ ಎಂದರು.
ಸರ್ಕಾರದ ಯೋಜನೆಗಳೇ ಬಿಜೆಪಿ ಗೆಲುವಿನ ಅಸ್ತ್ರವಾಗಲಿದೆ. ಅಭಿವೃದ್ಧಿ ಯೋಜನೆಗಳ ಬಗ್ಗೆ ಜನರಿಗೆ ಮನವರಿಕೆ ಮಾಡಿ ಮತ ಕೇಳಲಾಗುವುದು ಎಂದು ಹೇಳಿದರು. ಇದೇ ವೇಳೆ, ಮಾಜಿ ಸಚಿವ ರಮೇಶ್ ಜಾರಕಿಹೊಳಿ ಉಪಚುನಾವಣಾ ಪ್ರಚಾರಕ್ಕೆ ಬರಲಿದ್ದಾರೆ ಎಂದು ಹೇಳಿದರು.
Laxmi News 24×7