Breaking News

ರಾಜ್ಯದ ಆಸ್ಪತ್ರೆಗಳಲ್ಲಿ ಗುತ್ತಿಗೆ ನೌಕರರ ಸೇವೆ 6 ತಿಂಗಳಿಗೆ ವಿಸ್ತರಣೆ : ರಾಜ್ಯ ಸರ್ಕಾರ ಆದೇಶ

Spread the love

ಬೆಂಗಳೂರು : ರಾಜ್ಯದಲ್ಲಿ ಕೊರೊನಾ ವೈರಸ್ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ವಿವಿಧ ಜಿಲ್ಲೆಗಳ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಮುಂದುವರೆಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

 

ರಾಜ್ಯದ 18 ಜಿಲ್ಲೆಗಳಲ್ಲಿ ಪ್ರತಿ ಜಿಲ್ಲೆಗೆ ತಾತ್ಕಾಲಿಕವಾಗಿ ವೈದ್ಯರು, ಶುಶ್ರೂಷಕರು, ಪ್ರಯೋಗಾಲಯ ತಜ್ಞರು ಸೇರಿ 45 ಮಂದಿ ನೇಮಕಕ್ಕೆ ಸೂಚಿಸಲಾಗಿತ್ತು. ಒಟ್ಟಾರೆ ರಾಜ್ಯದಲ್ಲಿ 810 ಸಿಬ್ಬಂದಿ ನೇಮಕಗೊಂಡಿದ್ದರು. ಸದ್ಯ ಅವರ ಸೇವಾವಧಿ ಮುಕ್ತವಾಗುತ್ತಿದೆ.

ಕೊರೊನಾ ನಿರ್ವಹಣೆ ಹಿನ್ನೆಲೆಯಲ್ಲಿ ಆಸ್ಪತ್ರೆಗಳಲ್ಲಿ ಗುತ್ತಿಗೆ ಹಾಗೂ ಹೊರಗುತ್ತಿಗೆ ಆಧಾರದಲ್ಲಿ ನೇಮಕಗೊಂಡಿರುವ ಸಿಬ್ಬಂದಿಯನ್ನು ಮುಂದಿನ 6 ತಿಂಗಳಿಗೆ ಅಂದರೆ 2021 ರ ಸೆಪ್ಟೆಂಬರ್ 30 ರವರೆಗೆ ವಿಸ್ತರಿಸಲಾಗಿದೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ