Breaking News
Home / ರಾಜ್ಯ / ಬೆಳಗಾವಿ: 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಡೆ ಬಿಜೆಪಿ ಪ್ರಾಬಲ್ಯ

ಬೆಳಗಾವಿ: 8 ವಿಧಾನಸಭಾ ಕ್ಷೇತ್ರಗಳ ಪೈಕಿ 6 ಕಡೆ ಬಿಜೆಪಿ ಪ್ರಾಬಲ್ಯ

Spread the love

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರ ವ್ಯಾಪ್ತಿಯ 8 ವಿಧಾನಸಭಾ ಕ್ಷೇತ್ರಗಳ ಪೈಕಿ 6ರಲ್ಲಿ ಬಿಜೆಪಿ ಶಾಸಕರಿದ್ದಾರೆ. ಎರಡು ಕಡೆ ಮಾತ್ರ ಕಾಂಗ್ರೆಸ್‌ ಪ್ರತಿನಿಧಿಗಳಿದ್ದಾರೆ. ಜೊತೆಗೆ ಜಿಲ್ಲಾ, ತಾಲ್ಲೂಕು ಪಂಚಾಯ್ತಿಯಲ್ಲೂ ಬಿಜೆಪಿಯವರ ಬಲವೇ ಹೆಚ್ಚಿದೆ. ಅಲ್ಲದೇ, ಈಚೆಗೆ ನಡೆದ ಗ್ರಾಮ ಪಂಚಾಯ್ತಿ ಚುನಾವಣೆಯಲ್ಲೂ ಕಮಲ ಪಕ್ಷದ ಬೆಂಬಲಿತರು ಜಾಸ್ತಿ ಸಂಖ್ಯೆಯಲ್ಲಿ ಗೆದ್ದಿದ್ದಾರೆ. ಇವೆಲ್ಲ ಅಂಶಗಳೂ ಉಪ ಚುನಾವಣೆಯಲ್ಲಿ ಪರಿಣಾಮ ಬೀರಲಿವೆ.

ಬೆಳಗಾವಿ ಉತ್ತರ (ಅನಿಲ ಬೆನಕೆ), ಬೆಳಗಾವಿ ದಕ್ಷಿಣ (ಅಭಯ ಪಾಟೀಲ), ಗೋಕಾಕ (ರಮೇಶ ಜಾರಕಿಹೊಳಿ), ಅರಭಾವಿ (ಕೆಎಂಎಫ್‌ ಅಧ್ಯಕ್ಷರೂ ಆಗಿರುವ ಬಾಲಚಂದ್ರ ಜಾರಕಿಹೊಳಿ), ರಾಮದುರ್ಗ (ಮಹಾದೇವಪ್ಪ ಯಾದವಾಡ), ಸವದತ್ತಿ ಯಲ್ಲಮ್ಮ (ವಿಧಾನಸಭೆ ಉಪಸಭಾಧ್ಯಕ್ಷರೂ ಆಗಿರುವ ಆನಂದ ಮಾಮನಿ) ಬಿಜೆಯವರು. ಹಲವು ನಿಗಮ-ಮಂಡಳಿಗಳಲ್ಲಿ ಸ್ಥಾನ ಪಡೆದಿರುವುದು ಕ್ಷೇತ್ರ ವ್ಯಾಪ್ತಿಯವರೇ ಆಗಿದ್ದಾರೆ.

ಮನವೊಲಿಸುವ ಹೊಣೆ:

‘ಅವರಿಗೆ ಪಕ್ಷದ ಗೆಲುವಿಗೆ ಶ್ರಮಿಸುವ ಜವಾಬ್ದಾರಿ ನೀಡಲಾಗಿದೆ. ಸರಣಿ ಸಭೆಗಳನ್ನು ನಡೆಸಿ, ವಿವಿಧ ಮೋರ್ಚಾಗಳಿಗೆ ಆಯಾ ಸಮಾಜದ ಮತದಾರರ ಮನವೊಲಿಸುವ ಹೊಣೆ ವಹಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.

ಬೆಳಗಾವಿ ಗ್ರಾಮೀಣ (ಕೆಪಿಸಿಸಿ ವಕ್ತಾರೆಯೂ ಆಗಿರುವ ಲಕ್ಷ್ಮಿ ಹೆಬ್ಬಾಳಕರ) ಹಾಗೂ ಬೈಲಹೊಂಗಲ (ಮಹಾಂತೇಶ ಕೌಜಲಗಿ)ದಲ್ಲಿ ಮಾತ್ರ ಕಾಂಗ್ರೆಸ್‌ ಶಾಸಕರಿದ್ದಾರೆ. ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿರುವ ಜಿಲ್ಲೆಯ ಪ್ರಭಾವಿ ನಾಯಕರಲ್ಲಿ ಒಬ್ಬರಾದ ಸತೀಶ ಜಾರಕಿಹೊಳಿ ಅವರಿಗೆ ಹೆಚ್ಚಿನ ಜವಾಬ್ದಾರಿ ನೀಡಲಾಗಿದೆ. ಚುನಾವಣೆ ಘೋಷಣೆಯಾದ ಬಳಿಕ ಅವರು ದೇವಸ್ಥಾನಕ್ಕೆ ಭೇಟಿ ನೀಡಿ ಅಚ್ಚರಿ ಮೂಡಿಸಿದ್ದಾರೆ


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ