Breaking News

ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. :ಸಿದ್ದರಾಮಯ್ಯ

Spread the love

ಬೆಂಗಳೂರು,ಮಾ.21- ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿ ಇರಲಿ. ನಾಲಿಗೆ ಕೂಡ ಎಂದು ಹೇಳುವ ಮೂಲಕ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್‍ಕುಮಾರ್‍ಕಟೀಲ್ ಅವರಿಗೆ ಬಿಸಿ ಮುಟ್ಟಿಸಿದ್ದಾರೆ.

ಕಾಂಗ್ರೆಸ್‍ಗೆ ರಾಜೀನಾಮೆ ನೀಡಲು ಸಿದ್ದರಾಮಯ್ಯ ಅವರಿಂದ 90 ಜೊತೆ ಬಟ್ಟೆ ಖರೀದಿಯಾಗಿದೆ ಎಂದು ನಳೀನ್‍ಕುಮಾರ್ ಕಟೀಲ್ ಹೇಳಿಕೆ ನೀಡಿದ್ದರು.

ಇದಕ್ಕೆ ಅಷ್ಟೇ ತೀಕ್ಷ್ಣವಾಗಿ ಟ್ವಿಟರ್‍ನಲ್ಲಿ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯನವರು, ಎಲ್ಲೆಲ್ಲೋ ಹೋಗಿ ಬಟ್ಟೆ ಬಿಚ್ಚಿ ಮರ್ಯಾದೆ ಕಳೆಯುತ್ತಿರುವ ಕರ್ನಾಟಕದ ಬಿಜೆಪಿ ನಾಯಕರಿಗೆ ದಾನ ಮಾಡೋಣ ಎಂದು 90 ಜೊತೆ ಬಟ್ಟೆ ಖರೀದಿ ಮಾಡಿದ್ದೇನೆ ಎಂದು ತಿರುಗೇಟು ನೀಡಿದ್ದಾರೆ.

ಬೇಕಿದ್ದರೆ ನಳೀನ್‍ಕುಮಾರ್ ಕಟೀಲ್ ಅವರಿಗೂ ಒಂದೆರಡು ಜೊತೆ ಬಟ್ಟೆ ದಾನ ಮಾಡುತ್ತೇನೆ ಎಂದು ಹೇಳಿರುವುದಲ್ಲದೆ, ಇನ್ನೂ 19 ಸಿ.ಡಿ ಇವೆಯಂತೆ. ಎಲ್ಲವೂ ಹಿಡಿತದಲ್ಲಿರಲಿ. ನಾಲಿಗೆ ಕೂಡ ಎಂದು ತೀಕ್ಷ್ಣವಾಗಿ ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಪ್ರಜ್ವಲ್ ರೇವಣ್ಣ ಕೇಸ್ – ಪೆನ್‌ಡ್ರೈವ್ ಹಂಚಿಕೆ ಪ್ರಕರಣದಲ್ಲಿ 13,712 ಪುಟಗಳ ಚಾರ್ಜ್‌ಶೀಟ್‌ ಸಲ್ಲಿಕೆ

Spread the loveಹಾಸನ: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅಶ್ಲೀಲ ವಿಡಿಯೋ ವೈರಲ್ ಪ್ರಕರಣದಲ್ಲಿ ಪೆನ್‌ಡ್ರೈವ್‌ ಹಂಚಿಕೆ ಸಂಬಂಧ ಎಸ್‌ಐಟಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ