Breaking News

ಖತರ್ನಾಕ್ ಕಳ್ಳರ ಬಂಧನ; ₹6 ಲಕ್ಷ ಮೌಲ್ಯದ 12 ಬೈಕ್​ ವಶ

Spread the love

ಮೈಸೂರು: ನಗರದ ನರಸಿಂಹರಾಜ ಠಾಣಾ ಪೊಲೀಸರು ಕಾರ್ಯಾಚರಣೆ ನಡೆಸಿ ಇಬ್ಬರು ದ್ವಿಚಕ್ರ ವಾಹನ ಕಳ್ಳರನ್ನು ಬಂಧಿಸಿದ್ದಾರೆ. ಫಯಾಜ್​ ಅಹಮ್ಮದ್​ ಹಾಗೂ ಮೊಕ್ತಾರ್​​ ಪಾಷಾ ಬಂಧಿತ ಆರೋಪಿಗಳು.

ಈ ಹಿಂದೆ ಹಲವು ಪ್ರಕರಣಗಳಲ್ಲಿ ಭಾಗಿಯಾಗಿದ್ದ ಆರೋಪಿಗಳು ನಕಲಿ ಕೀ ಬಳಸಿ ಬೈಕ್​ಗಳನ್ನ ಕಳ್ಳತನ ಮಾಡುತ್ತಿದ್ದರು. ಬೈಕ್​ ಕಳುವಾಗಿರುವ ಸಂಬಂಧ ಪೊಲೀಸ್​ ಠಾಣೆಯಲ್ಲಿ ದೂರುಗಳು ದಾಖಲಾಗಿದ್ದವು. ಕದ್ದ ಬೈಕ್​ಗಳನ್ನ ಮಾರಾಟ ಮಾಡಲು ಮುಂದಾದ ಆರೋಪಿಗಳು ಪೊಲೀಸರಿಗೆ ಸಿಕ್ಕಿಬಿದ್ದಿದ್ದಾರೆ.

ಬಂಧಿತ ಆರೋಪಿಗಳಿಂದ ಪೊಲೀಸರು, 6 ಲಕ್ಷ ರೂಪಾಯಿ ಮೌಲ್ಯದ 12 ಬೈಕ್​ಗಳನ್ನ ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ನರಸಿಂಹರಾಜ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಅರಭಾವಿ ಆಂಜನೇಯ ದೇವರ ಕಾರ್ತೀಕೋತ್ಸವದಲ್ಲಿ ಪಾಲ್ಗೊಂಡ ಶಾಸಕ ಬಾಲಚಂದ್ರ ಜಾರಕಿಹೊಳಿ

Spread the love  ಮೂಡಲಗಿ- ತಾಲ್ಲೂಕಿನ ಇತಿಹಾಸ ಪ್ರಸಿದ್ಧ ಅರಭಾವಿ ಆಂಜನೇಯ ದೇವಸ್ಥಾನಕ್ಕೆ ತೆರಳಿ ಶಾಸಕ ಮತ್ತು ಬೆಮುಲ್ ಅಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ