Breaking News

ಕೊರೊನಾ ಎರಡನೇ ಅಲೆ ಎದುರಿಸಲು ಹೊಸ ರೂಲ್ಸ್:ಸಚಿವ ಡಾ. ಸುಧಾಕರ್ ಘೋಷಣೆ

Spread the love

ಕೊರೊನಾ ಎರಡನೇ ಅಲೆ ಈಗಾಗಲೇ ಆರಂಭಗೊಂಡಿದ್ದು, ಈ ನಿಟ್ಟಿನಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕಗೊಂಡಿರುವ ವೈದ್ಯರು, ಸಿಬ್ಬಂದಿಗಳ ಸೇವಾವಧಿ ವಿಸ್ತರಣೆ ಮಾಡಿ ಎಂದು ವೈದ್ಯಕೀಯ ಸಚಿವ ಡಾ. ಸುಧಾಕರ್ ಆದೇಶ ಹೊರಡಿಸಿದ್ದಾರೆ.

ಆ ಮೂಲಕ ಕೊರೊನಾ ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ನೇಮಕವಾಗಿದ್ದ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿಗಳ 6 ತಿಂಗಳ ಸೇವಾವಧಿ ವಿಸ್ತರಿಸಿದ್ದಾರೆ.ಕೊರೊನಾ ನಿಯಂತ್ರಣಾ ಕಾರ್ಯಕ್ಕಾಗಿ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಂಡಿರುವ ವೈದ್ಯರು ಹಾಗೂ ಸಿಬ್ಬಂದಿಗಳ ಸೇವಾವಧಿಯನ್ನು 01.04.2021 ರಿಂದ ಅನ್ವಯವಾಗುವಂತೆ 6 ತಿಂಗಳವರೆಗೆ ಅಂದರೆ 30.09.2021 ರವರೆಗೆ ವಿಸ್ತರಿಸಲಾಗಿದೆ.

 


Spread the love

About Laxminews 24x7

Check Also

ಇನ್ಮುಂದೆ ಆನ್​ಲೈನ್ ಬೆಟ್ಟಿಂಗ್ ನಿಷೇಧ:

Spread the loveಬೆಂಗಳೂರು: ಆನ್​ಲೈನ್ ಬೆಟ್ಟಿಂಗ್ ಹಾಗೂ ಗ್ಯಾಂಬ್ಲಿಂಗ್​ಗೆ ಅಂಕುಶ ಹಾಕಲು ರಾಜ್ಯ ಸರ್ಕಾರ ಹೊಸ ಮಸೂದೆಯನ್ನು ರೂಪಿಸಿದೆ.‌ ಕರ್ನಾಟಕ ಪೊಲೀಸ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ