Breaking News
Home / ಜಿಲ್ಲೆ / ಬೆಳಗಾವಿ / ಲೋಕಸಭೆ ಉಪಚುನಾವಣೆ ಸಿದ್ಧತೆ ಪೂರ್ಣ, ನಾಳೆಯಿಂದ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಹಿರೇಮಠ

ಲೋಕಸಭೆ ಉಪಚುನಾವಣೆ ಸಿದ್ಧತೆ ಪೂರ್ಣ, ನಾಳೆಯಿಂದ ಕಟ್ಟು ನಿಟ್ಟಿನ ನೀತಿ ಸಂಹಿತೆ ಜಾರಿ: ಜಿಲ್ಲಾಧಿಕಾರಿ ಹಿರೇಮಠ

Spread the love

ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಬೆಳಗಾವಿ ಜಿಲ್ಲಾಧಿಕಾರಿ ಮಹತ್ವದ ಮಾಹಿತಿ ನೀಡಿದರು. ಏಪ್ರೀಲ್ 17ರಂದು ಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ ಎಂದು ತಿಳಿಸಿದರು.

: ಬೆಳಗಾವಿ ಲೋಕಸಭೆ ಉಪಚುನಾವಣೆ ಹಿನ್ನೆಲೆಯಲ್ಲಿ ಸುದ್ದಿಗೋಷ್ಠಿ ನಡೆಸಿದ ಬೆಳಗಾವಿ ಜಿಲ್ಲಾಧಿಕಾರಿ ಮಹಾಂತೇಶ ಹಿರೇಮಠ ಮಹತ್ವದ ಮಾಹಿತಿ ನೀಡಿದರು. ಏಪ್ರಿಲ್ 17ರಂದು ಉಪಚುನಾವಣೆ ಮತದಾನ ನಿಗದಿಯಾಗಿದ್ದು, ಮಾರ್ಚ್ 23ರಿಂದ ಗೆಜೆಟ್ ಪ್ರಕಟಣೆ ಮೂಲಕ ಚುನಾವಣೆ ಪ್ರಕ್ರಿಯೆಗಳು ಆರಂಭವಾಗಲಿವೆ. ನಾಮಪತ್ರ ಸಲ್ಲಿಸಲು ಮಾರ್ಚ್ 30 ಕೊನೆಯ ದಿನವಾಗಿದೆ. ಮಾರ್ಚ್ 31ರಂದು ನಾಮಪತ್ರ ಪರಿಶೀಲಿಸಲಾಗುವುದು. ಉಮೇದುವಾರಿಕೆ ಹಿಂದಕ್ಕೆ ಪಡೆಯಲು ಏಪ್ರಿಲ್ 3 ಕೊನೆಯ ದಿನವಾಗಿದೆ. ಏಪ್ರಿಲ್ 17ರಂದು ಮತದಾನ ನಡೆಯಲಿದೆ. ಮೇ 2ರಂದು ಮತ ಎಣಿಕೆ ನಡೆಯಲಿದ್ದು, ಮೇ 4ರೊಳಗೆ ಚುನಾವಣೆ ಪ್ರಕ್ರಿಯೆ ಪೂರ್ಣಗೊಳಿಸಲು ತಿಳಿಸಲಾಗಿದೆ ಎಂದು ತಿಳಿಸಿದರು.

ಇನ್ನು ಉಪಚುನಾವಣೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಎಲ್ಲ ಕ್ರಮ ಕೈಗೊಳ್ಳಲಾಗಿದೆ. ನೀತಿ ಸಂಹಿತೆ ನಾಳೆಯೇ ಜಾರಿಗೆ ಬರಲಿದ್ದು, ನೀತಿ, ನಿಯಮಗಳ ಪಾಲನೆಗೆ ಸೂಚನೆ ನೀಡಲಾಗಿದೆ. ಪೊಲೀಸ್ ಇಲಾಖೆ, ಕಂದಾಯ ಇಲಾಖೆ, ಆರೋಗ್ಯ ಇಲಾಖೆ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ ಚುನಾವಣೆಯನ್ನು ಯಶಸ್ವಿಗೊಳಿಸುತ್ತೇವೆ. ಸಾರ್ವಜನಿಕರು ಸಹಕಾರ ನೀಡಬೇಕು. ಯಾವುದೇ ಮಾಹಿತಿಗೆ ಸಂಬಂಧಿಸಿದ ಅಧಿಕಾರಿ ಇಲ್ಲವೇ ಜಿಲ್ಲಾಡಳಿತವನ್ನು ಸಂಪರ್ಕಿಸಬೇಕು ಎಂದು ಮನವಿ ಮಾಡಿದರು.

ಜಿಲ್ಲಾ ಪೊಲೀಸ್ ವರಿಷ್ಠ ಲಕ್ಷ್ಮಣ ನಿಂಬರಗಿ ಮಾತನಾಡಿ, ಉಪಚುನಾವಣೆಯನ್ನು ಸುವ್ಯವಸ್ಥಿತವಾಗಿ ನಡೆಸಲು ಪೊಲೀಸ್ ಇಲಾಖೆ ಸಿದ್ಧತೆ ಮಾಡಿಕೊಂಡಿದೆ. ಶಾಂತಿ, ಸುವ್ಯವಸ್ಥೆ, ಬಂದೋಬಸ್ತ್‍ಗೆ ಅಗತ್ಯ ಪೊಲೀಸ್ ಸಿಬ್ಬಂದಿ, ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಸಾರ್ವಜನಿಕರ ಸಹಕಾರ ಪಡೆದು ಚುನಾವಣೆ ಯಶಸ್ವಿಗೊಳಿಸಲು ಎಲ್ಲ ರೀತಿಯ ಮುಂಜಾಗ್ರತೆ ವಹಿಸಲಾಗುವುದು ಎಂದು ತಿಳಿಸಿದರು.

ಒಟ್ಟಿನಲ್ಲಿ ನಾಳೆಯಿಂದ ಉಪಚುನಾವಣೆ ಹವಾ ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಬೀಸಲಿದೆ. ರಣ ಬಿಸಿಲಿನ ಜೊತೆಗೆ ಲೋಕಸಭೆ ಕಣದಲ್ಲೂ ಚುನಾವಣೆ ಬಿಸಿ ಏರಲಿದೆ. ಚುನಾವಣೆಯ ಸುವ್ಯವಸ್ಥಿತ ನಿರ್ವಹಣೆಗಾಗಿ ಜಿಲ್ಲಾಡಳಿತ ಎಲ್ಲ ಸಿದ್ಧತೆ ಕೈಗೊಂಡಿದೆ


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ