ಬೆಂಗಳೂರು : ರಾಜ್ಯ ಸರ್ಕಾರವು ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಸಿಹಿಸುದ್ದಿಯೊಂದನ್ನು ನೀಡಿದ್ದು, ವಿಶೇಷ ಮಕ್ಕಳ ಅನುದಾನಿತ ಶಾಲೆಗಳ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಭರವಸೆ ನೀಡಿದ್ದಾರೆ.
ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವೆ ಶಶಿಕಲಾ ಜೊಲ್ಲೆ, ರಾಜ್ಯದಲ್ಲಿರುವ ವಿಶೇಷ ಮಕ್ಕಳ ಅನುದಾನಿತ ಶಾಲೆಗಳಲ್ಲಿ ಕೆಲಸ ಮಾಡುತ್ತಿರುವ ಶಿಕ್ಷಕರಿಗೆ ಪಿಂಚಣಿ ಸೌಲಭ್ಯ ಒದಗಿಸುವ ಕುರಿತು ಶೀಘ್ರದಲ್ಲೇ ನಿರ್ಧಾರ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ಹಣಕಾಸು ಇಲಾಖೆಯು 2019 ರ ಜುಲೈ 17 ರಂದು ಹೊರಡಿಸಿರುವ ಆದೇಶದಲ್ಲಿ ಕೆಲವು ತೊಡಕುಗಳಿವೆ. ಅವುಗಳನ್ನು ನಿವಾರಿಸಲು ಮುಂದಿನ ಎರಡು ಸಂಪುಟ ಸಭೆಗಳ ಒಳಗಾಗಿ ಸೂಕ್ತ ನಿರ್ಣಯ ಅಂಗೀಕರಿಸಲಾಗುವುದು ಎಂದು ಹೇಳಿದ್ದಾರೆ
Laxmi News 24×7