Breaking News

15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ…?

Spread the love

ನವದೆಹಲಿ: ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ನೀಡಿರುವ ಪ್ರಸ್ತಾವನೆಯು ಅಂತಿಮಗೊಂಡರೆ, 15 ವರ್ಷಕ್ಕಿಂತ ಹಳೆಯ ಸರ್ಕಾರಿ ವಾಹನಗಳ ನೋಂದಣಿ ನವೀಕರಣವು ಏಪ್ರಿಲ್‌ 1ರ ಬಳಿಕ ಸಾಧ್ಯವಾಗುವುದಿಲ್ಲ.

ಸರ್ಕಾರದ ಎಲ್ಲಾ ವಾಹನಗಳಿಗೆ; ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಕೇಂದ್ರಾಡಳಿತ ಪ್ರದೇಶಗಳು, ಕೇಂದ್ರೋದ್ಯಮಗಳು, ಮಹಾನಗರ ಪಾಲಿಕೆ ಮತ್ತು ಸ್ವಾಯತ್ತ ಸಂಸ್ಥೆಗಳ ಎಲ್ಲಾ ವಾಹನಗಳಿಗೂ ಇದು ಅನ್ವಯವಾಗಲಿದೆ.

ಈ ಕುರಿತು ಸಚಿವಾಲಯವು ಶನಿವಾರ ಟ್ವೀಟ್ ಮಾಡಿದೆ.

ಕರಡು ನಿಯಮಗಳ ಕುರಿತು ಪ್ರತಿಕ್ರಿಯೆ, ಸಲಹೆ, ಆಕ್ಷೇಪ ಇದ್ದಲ್ಲಿ 30 ದಿನಗಳ ಒಳಗೆ ತಿಳಿಸುವಂತೆ ಶುಕ್ರವಾರ ಅಧಿಸೂಚನೆ ಹೊರಡಿಸಲಾಗಿದೆ.

ಹಳೆಯ ವಾಹನಗಳನ್ನು ಸ್ವಯಂಪ್ರೇರಿತರಾಗಿ ಗುಜರಿಗೆ ಹಾಕುವ ನೀತಿ ಕೇಂದ್ರ ಬಜೆಟ್‌ನಲ್ಲಿ ಘೋಷಿಸಿದ ನಂತರ ಈ ಬೆಳವಣಿಗೆ ನಡೆದಿದೆ.

ಹೊಸ ಗುಜರಿ ನೀತಿಯಿಂದಾಗಿ ₹ 10 ಸಾವಿರ ಕೋಟಿಗಳಷ್ಟು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗ ಸೃಷ್ಟಿ ಆಗುವ ಅಂದಾಜು ಮಾಡಲಾಗಿದೆ.


Spread the love

About Laxminews 24x7

Check Also

ಮಹಿಳೆಯರು ಅಭಿವೃದ್ಧಿಯಾದರೆ ಮನೆ, ದೇಶ ಅಭಿವೃದ್ಧಿಯಾದಂತೆ : ಸಚಿವೆ ಲಕ್ಷ್ಮೀ ಹೆಬ್ಬಾಳಕರ್‌

Spread the love ಮಹಿಳಾ ವಿಚಾರ ಗೋಷ್ಠಿ ಉದ್ಘಾಟಿಸಿದ ಸಚಿವರು  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ