ವಿಜಯೇಂದ್ರಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ

Spread the love

ಶಿವಮೊಗ್ಗ: ಜಮೀನು ವಿವಾದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರಿಗೆ ದೂರು ನೀಡಿದ್ದ ಮಹಿಳೆ ಮೇಲೆ ದುಷ್ಕರ್ಮಿಗಳು ಸೋಮವಾರ ಬೆಳಿಗ್ಗೆ ಹಲ್ಲೆ ನಡೆಸಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ಮಹಿಳೆಯನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭದ್ರಾವತಿ ತಾಲೂಕು ಶಂಕರಘಟ್ಟದಲ್ಲಿ ಮಹಿಳೆ ಮೇಲೆ ಹಲ್ಲೆ ಮಾಡಲಾಗಿದೆ. ಅವರು ಖರೀದಿಸಿದ ಜಮೀನಿನ ಮೇಲೆ ಪ್ರಭಾವಿಗಳು ಕಣ್ಣಿಟ್ಟಿದ್ದು ಕಬಳಿಸಲು ಮುಂದಾಗಿ ಮಹಿಳೆಗೆ ನಿರಂತರವಾಗಿ ಹಿಂಸೆ ಕೊಡುತ್ತಿದ್ದಾರೆ. ಇದರಿಂದ ಬೇಸತ್ತ ಮಹಿಳೆ ದಯಾಮರಣಕ್ಕಾಗಿ ಬಿ.ವೈ. ವಿಜಯೇಂದ್ರ ಅವರಿಗೆ ಮನವಿ ಮಾಡಿ ದೂರು ನೀಡಿದ್ದರು.

ಮಾರ್ಚ್ 15 ರಂದು ತರೀಕೆರೆಗೆ ಆಗಮಿಸಿದ್ದ ಅವರಿಗೆ ದೂರು ನೀಡಲಾಗಿತ್ತು. ಇದಾದ ನಂತರ ನಿನ್ನೆ ಬೆಳಿಗ್ಗೆ ಮಹಿಳೆ ಮನೆಗೆ ದುಷ್ಕರ್ಮಿಗಳು ನುಗ್ಗಿ ಹಲ್ಲೆ ಮಾಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಹಿಳೆಯನ್ನು ರಾತ್ರಿ ಮಹಿಳಾ ಆಯೋಗದ ಅಧಿಕಾರಿಗಳು ಮತ್ತು ಭದ್ರಾವತಿ ಪೊಲೀಸರು ಭೇಟಿ ಮಾಡಿ ದೂರು ಸ್ವೀಕರಿಸಿದ್ದಾರೆ.


Spread the love

About Laxminews 24x7

Check Also

ವಾಟಾಳ್ ನಾಗರಾಜ್‌ಗೆ ರಾಜ್ಯೋತ್ಸವ ಪ್ರಶಸ್ತಿ ಕೊಡಲು ಕ್ರಮ: ಶಿವರಾಜ್ ತಂಗಡಗಿ

Spread the loveಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್‌ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸ ಸರ್ಕಾರ ಮಾಡಲಿದೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ