Breaking News

ಸಿಡಿ ಪ್ರಕರಣ: ಯುವತಿ ಸ್ಪಷ್ಟ ದೂರು ನೀಡುತ್ತಿಲ್ಲ; ವಿಪಕ್ಷದವರು ಕಾಲಹರಣ ಮಾಡುತ್ತಿದ್ದಾರೆ ಎಂದ ಸಿಎಂ

Spread the love

ನಡೆಸುತ್ತಿರುವ ಬಗ್ಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಸಿಎಂ ಬಿ.ಎಸ್. ಯಡಿಯೂರಪ್ಪ, ವಿಪಕ್ಷದವರು ಕಾಲಹರಣ ಮಾಡುತ್ತಿದ್ದಾರೆ ಎಂದು ಗುಡುಗಿದ್ದಾರೆ.

ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಯಡಿಯೂರಪ್ಪ, ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪ ಕೇಳಿಬಂದ ಬೆನ್ನಲ್ಲೇ ರಮೇಶ್ ಜಾರಕಿಹೊಳಿ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಿದರು. ಪ್ರಕರಣದ ಬಗ್ಗೆ ಎಸ್‌ಐಟಿಯಿಂದ ತನಿಖೆ ಕೂಡ ನಡೆಸಲಾಗುತ್ತಿದೆ. ಆ ಹೆಣ್ಣುಮಗಳು ಬಂದು ಸ್ಪಷ್ಟವಾಗಿ ದೂರು ನೀಡುತ್ತಿಲ್ಲ. ದೂರು ನೀಡಿದರೆ ಪ್ರಕರಣಕ್ಕೆ ಒಂದು ಅಂತ್ಯ ಸಿಗುತ್ತದೆ. ಆದರೂ ಕೂಡ ವಿಪಕ್ಷ ನಾಯಕರು ಧರಣಿ ನಡೆಸುತ್ತಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದರು.

ಕುಂಟು ನೆಪ ಹೇಳಿ ನಿನ್ನೆ ಸದನದಲ್ಲಿ ಧರಣಿ ಮಾಡಿದರು. ಪ್ರಕರಣದ ಬಗ್ಗೆ ತನಿಖೆಯನ್ನು ನಡೆಸುತ್ತಿದ್ದೇವೆ. ವಿಪಕ್ಷದವರಿಗೆ ಚರ್ಚಿಸಲು ಬೇರೆ ವಿಷಯವಿಲ್ಲದೇ ಕಾಲಹರಣ ಮಾಡುತ್ತಿದ್ದಾರೆ. ಸುಗಮ ಕಲಾಪಕ್ಕೆ ಅವಕಾಶ ನೀಡಬೇಕು ಎಂದು ಸಿಎಂ ಹೇಳಿದ್ದಾರೆ.


Spread the love

About Laxminews 24x7

Check Also

ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು!

Spread the love ಹುದಲಿ ಹಾಗೂ ಸುತ್ತಮುತ್ತಲಿನ ಗ್ರಾಮಗಳ ವಿದ್ಯಾರ್ಥಿಗಳ ವಿದ್ಯಾಭ್ಯಾಸದ ಹಾದಿಯಲ್ಲಿ ಹೊಸ ಬೆಳಕು! ಯಮಕನಮರಡಿ ವಿಧಾನಸಭಾ ಕ್ಷೇತ್ರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ