Breaking News
Home / ಜಿಲ್ಲೆ / ಬೆಳಗಾವಿ / ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್

ಕೋವಿಡ್ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ : ಡಾ.ಕೆ.ಹರೀಶ್ ಕುಮಾರ್

Spread the love

ಬೆಳಗಾವಿ: ಕೋವಿಡ್ ಲಸಿಕೆಯಿಂದ ಯಾವುದೇ ಅಡ್ಡಪರಿಣಾಮವಿಲ್ಲ ಎಂಬುದು ಖಚಿತವಾಗಿರುವುದರಿಂದ ಲಸಿಕೆ ಪಡೆಯಲು ಜನರು ಮುಂದೆ ಬರುತ್ತಿದ್ದಾರೆ. ಆದ್ದರಿಂದ ಈ ಸಂದರ್ಭವನ್ನು ಬಳಸಿಕೊಂಡು ಜಿಲ್ಲೆಯಲ್ಲಿ ಎಲ್ಲರಿಗೂ ಲಸಿಕೆ ನೀಡಲು ಅಗತ್ಯ ವ್ಯವಸ್ಥೆ ಕಲ್ಪಿಸಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.

ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣ ಕುರಿತು ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ (ಮಾ.23) ನಡೆದ ತಹಶಿಲ್ದಾರರ ಜತೆಗಿನ ವಿಡಿಯೋ ಸಂವಾದದಲ್ಲಿ ಅವರು ಮಾತನಾಡಿದರು.

ಲಸಿಕೆ ಹಾಕಿಸಿಕೊಳ್ಳಲು ಅನುಕೂಲವಾಗುವಂತೆ ಗ್ರಾಮೀಣ ಪ್ರದೇಶಗಳ ಜನರಿಗೆ ಸಾರಿಗೆ ವ್ಯವಸ್ಥೆ ಮತ್ತಿತರ ಮೂಲಸೌಕರ್ಯವನ್ನು ಒದಗಿಸುವ ಮೂಲಕ ಲಸಿಕಾಕರಣ ಪ್ರಮಾಣವನ್ನು ಹೆಚ್ಚಿಸಲು ಎಲ್ಲ ರೀತಿಯ ಕ್ರಮವನ್ನು ಅಧಿಕಾರಿಗಳು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ಹರೀಶ್ ಕುಮಾರ್ ಸೂಚನೆ ನೀಡಿದರು.

ಸೋಂಕಿತರ ಸಂಪರ್ಕಿತರನ್ನು ಗುರುತಿಸಬೇಕು; ಪರೀಕ್ಷಿಸಬೇಕು; ಚಿಕಿತ್ಸೆ ಒದಗಿಸಬೇಕು ಇದರ ಜತೆಗೆ ಉಳಿದವರಿಗೆ ಲಸಿಕೆ ನೀಡಲು ಪ್ರಯತ್ನಿಸಬೇಕು ಎಂದು ತಿಳಿಸಿದರು.

ಕೋವಿಡ್ ನಿಯಂತ್ರಣಕ್ಕಾಗಿ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ವಿಪತ್ತು ನಿರ್ವಹಣಾ ಕಾಯ್ದೆಯಡಿ ಅವಕಾಶ ನೀಡಲಾಗಿದೆ. ಇದನ್ನು ಬಳಸಿಕೊಂಡು ಸೂಕ್ತ ನಿರ್ಧಾರವನ್ನು ಕೈಗೊಳ್ಳಬೇಕು ಎಂದು ಉಪ ವಿಭಾಗಾಧಿಕಾರಿ ಹಾಗೂ ತಹಶೀಲ್ದಾರರಿಗೆ ನಿರ್ದೇಶನ ನೀಡಿದರು.

ಅದೇ ರೀತಿ ಆರೋಗ್ಯ ಇಲಾಖೆಯ ಅಧಿಕಾರಿಗಳು/ಸಿಬ್ಬಂದಿ ಕೂಡ ಕೋವಿಡ್ ನಿಯಂತ್ರಣ ಮತ್ತು ಲಸಿಕಾಕರಣದಲ್ಲಿ ಸಕ್ರಿಯವಾಗಿ ತೊಡಗಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಡಾ.ಹರೀಶ್ ಕುಮಾರ್ ತಿಳಿಸಿದರು.

ಕಂದಾಯ, ಪೊಲಿಸ್, ಆರೋಗ್ಯ ಹಾಗೂ ಜಿಲ್ಲಾ ಪಂಚಾಯತ ಸೇರಿದಂತೆ ಎಲ್ಲ ಇಲಾಖೆಗಳು ಸಮನ್ವಯದೊಂದಿಗೆ ಲಸಿಕಾಕರಣ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು.


Spread the love

About Laxminews 24x7

Check Also

ಜನರು ತಿಂಗಳುಗಟ್ಟಲೆ ಓಡಾಡಿದರು ವೀಸಾ ಸಿಗಲ್ಲ, ಪ್ರಜ್ವಲ್ ಗೆ ಒಂದೇ ದಿನದಲ್ಲಿ ಹೇಗೆ ಸಿಕ್ಕಿತು? : ವಿನಯ್ ಕುಲಕರ್ಣಿ

Spread the loveಹಾವೇರಿ : ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾವೇರಿಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ