Breaking News

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕಠಿಣ ಕ್ರಮ : ಸಚಿವ ಜಗದೀಶ್ ಶೆಟ್ಟರ್

Spread the love

ಬೆಂಗಳೂರು : ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಅಂತಹ ಕೈಗಾರಿಕೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಜಗದೀಶ್ ಶೆಟ್ಟರ್ ಎಚ್ಚರಿಕೆ ನೀಡಿದ್ದಾರೆ.

ವಿಧಾನಪರಿಷತ್ ನಲ್ಲಿ ಮಾತನಾಡಿದ ಸಚಿವರು, ಕೈಗಾರಿಕಾ ನೀತಿ 2020-25 ರ ಅನ್ವಯ ಸರ್ಕಾರದ ಸೌಲಭ್ಯ ಪಡೆದು ಸ್ಥಾಪಿಸಿರುವ ಕೈಗಾರಿಕೆಗಳಲ್ಲಿ ಅರ್ಹತೆ ಇರುವ ಸ್ಥಳೀಯರಿಗೆ ಉದ್ಯೋಗ ನೀಡದಿದ್ದರೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.

 

ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಶೇ. 100 ರಷ್ಟು ಉದ್ಯೋಗ ನೀಡಬೇಕು. ಒಟ್ಟಾರೆ ಶೇ. 70 ರಷ್ಟು ಉದ್ಯೋಗ ನೀಡಬೇಕಾಗುತ್ತದೆ. ಬಹುತೇಕ ಕೈಗಾರಿಕೆಗಳು ಸ್ಥಳೀಯರಿಗೆ ಉದ್ಯೋಗ ನೀಡಿವೆ. ಆದರೂ ಕೈಗಾರಿಕೆಗಳಿಗೆ ಭೇಟಿ ನೀಡಿ ಪರಿಶೀಲಿಸುವಂತೆ ಆಯಾ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.


Spread the love

About Laxminews 24x7

Check Also

ಅಭಿವೃದ್ಧಿಯ ಹರಿಕಾರರು ಶೋಷಿತ ವರ್ಗಗಳ ಆಶಾಕಿರಣ ಬಡವರ ಬಂಧು ಆಹಾರ ಸಚಿವ ಕೆ.ಹೆಚ್. ಮುನಿಯಪ್ಪ ಜನ್ಮದಿನಾಚರಣೆ ಸಂಭ್ರಮ

Spread the loveದೇವನಹಳ್ಳಿ:  ರಾಜ್ಯದ ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವರು ಹಾಗೂ ಬೆಂಗಳೂರು ಗ್ರಾಮಾಂತರ ಜಿಲ್ಲಾ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ