Breaking News

ರಾಜ್ಯ ಸರ್ಕಾರದಿಂದ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್

Spread the love

ಬೆಂಗಳೂರು : ಉದ್ಯೋಗಾಕಾಂಕ್ಷಿಗಳಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿಯೊಂದನ್ನು ನೀಡಿದ್ದು, ಪೌರಾಡಳಿತ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಕ್ರಮ ಕೈಗೊಳ್ಳಲಾಗಿದ್ದು, 530 ಹುದ್ದೆಗಳ ಭರ್ತಿಗೆ ಕರ್ನಾಟಕ ಲೋಕಸೇವಾ ಆಯೋಗದಿಂದ ನೇಮಕಾತಿ ಪ್ರಕ್ರಿಯೆ ಮಾಡಲಾಗುತ್ತಿದೆ ಎಂದು ಪೌರಾಡಳಿತ ಮತ್ತು ಸಕ್ಕರೆ ಸಚಿವ ಎಂ.ಟಿ.ಬಿ. ನಾಗರಾಜು ತಿಳಿಸಿದ್ದಾರೆ.

 

ಪೌರಾಡಳಿತ ಇಲಾಖೆಯಲ್ಲಿ 9972 ಹುದ್ದೆಗಳು ಖಾಲಿ ಇವೆ. ಗ್ರೂಪ್ ಸಿ ವೃಂದದ ಖಾಲಿ ಹುದ್ದೆಗಳನ್ನು ಸರ್ಕಾರದ ಹಂತದಲ್ಲಿ ಹಾಗೂ ಗ್ರೂಪ್ ಬಿ ಮತ್ತು ಸಿ ವೃಂದದಲ್ಲಿ ಖಾಲಿ ಹುದ್ದೆಗಳನ್ನು ಪೌರಾಡಳಿತ ನಿರ್ದೇಶನಾಲಯದ ಹಂತದಲ್ಲಿ ಕಾಲ ಕಾಲಕ್ಕೆ ಭರ್ತಿ ಮಾಡಲಾಗುವುದು ಎಂದು ಹೇಳಿದ್ದಾರೆ.

ಮುಂಬಡ್ತಿ ಕೋಟಾ ಅಡಿಯಲ್ಲಿ ಭರ್ತಿ ಮಾಡಲಾಗುವ ಸಿ ವೃಂದದ ಖಾಲಿ ಹುದ್ದೆಗಳನ್ನು ನಿಯಮಾನುಸಾರ ಭರ್ತಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.


Spread the love

About Laxminews 24x7

Check Also

ಕರ್ನಾಟಕದಲ್ಲಿ ಈ ಬಾರಿ ಮುಂಗಾರು ಕೊರತೆ – ಕುಡಿಯುವ ನೀರಿಗೆ ತೊಂದರೆ ಆಗದಂತೆ ಕ್ರಮ ಕೈಗೊಳ್ಳಲು ಸಿಎಂ ಸೂಚನೆ

Spread the loveಬೆಂಗಳೂರು: ರಾಜ್ಯಕ್ಕೆ ಈ ಬಾರಿ ಮುಂಗಾರು ಆತಂಕ ದೊಡ್ಡ ಮಟ್ಟದಲ್ಲಿ ತಟ್ಟಲಿದೆ. ವಾಡಿಕೆಗಿಂತ ಈ ಬಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ