Breaking News
Home / ರಾಜ್ಯ / ಮುಂದಿನ 8-10 ವರ್ಷ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿ

ಮುಂದಿನ 8-10 ವರ್ಷ ಪೆಟ್ರೋಲ್ ಮತ್ತು ಡೀಸೆಲ್ ನ್ನು ಜಿಎಸ್ ಟಿ ವ್ಯಾಪ್ತಿಯಡಿ ತರಲು ಸಾಧ್ಯವಿಲ್ಲ: ಸುಶಿಲ್ ಕುಮಾರ್ ಮೋದಿ

Spread the love

ನವದೆಹಲಿ: ಪೆಟ್ರೋಲ್ ಮತ್ತು ಡೀಸೆಲ್ ನ್ನು ಇನ್ನು 8-10 ವರ್ಷ ಜಿಎಸ್ ಟಿ ಆಡಳಿತದಡಿ ತರಲು ಸಾಧ್ಯವಿಲ್ಲ, ಇದರಿಂದ ವಾರ್ಷಿಕವಾಗಿ ಎಲ್ಲಾ ರಾಜ್ಯಗಳಿಗೆ 2 ಲಕ್ಷ ಕೋಟಿ ರೂಪಾಯಿ ಆದಾಯ ನಷ್ಟವಾಗಲಿದೆ ಎಂದು ಬಿಜೆಪಿ ನಾಯಕ ಸುಶಿಲ್ ಕುಮಾರ್ ಮೋದಿ ಹೇಳಿದ್ದಾರೆ.

ಹಣಕಾಸು ಮಸೂದೆ 2021ರ ಕುರಿತು ಇಂದು ರಾಜ್ಯಸಭೆಯಲ್ಲಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ 5 ಲಕ್ಷ ಕೋಟಿಗಿಂತಲೂ ಹೆಚ್ಚು ತೆರಿಗೆಯನ್ನು ಸಂಗ್ರಹಿಸುತ್ತವೆ.

ಕಳೆದೊಂದು ವರ್ಷದಿಂದ ನಿರಂತರವಾಗಿ ಪೆಟ್ರೋಲ್ ಬೆಲೆ ಏರಿಕೆಯಾಗಿ ಕೆಲವು ರಾಜ್ಯಗಳಲ್ಲಿ 100 ರೂಪಾಯಿಗೆ ಲೀಟರ್ ಗೆ ತಲುಪಿತ್ತು. ಕಳೆದ ಮಾರ್ಚ್ ನಂತರ ಇಂದು ಪೆಟ್ರೋಲ್ ಬೆಲೆ ಕೊಂಚ ಇಳಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಸುಶಿಲ್ ಕುಮಾರ್ ಮೋದಿಯವರ ಹೇಳಿಕೆ ಮಹತ್ವ ಪಡೆದಿದೆ.

ಮುಂದಿನ 8ರಿಂದ 10 ವರ್ಷಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಅನ್ನು ಜಿಎಸ್ಟಿ ವ್ಯಾಪ್ತಿಗೆ ತರಲು ಸಾಧ್ಯವಿಲ್ಲ ಏಕೆಂದರೆ ರಾಜ್ಯಗಳು ವಾರ್ಷಿಕ 2 ಲಕ್ಷ ಕೋಟಿ ರೂಪಾಯಿ (ಒಟ್ಟಾರೆಯಾಗಿ ಎಲ್ಲಾ ರಾಜ್ಯಗಳಿಂದ) ನಷ್ಟ ಅನುಭವಿಸಲು ಸಿದ್ಧವಾಗಿಲ್ಲ ಎಂದು ರಾಜ್ಯಸಭೆಯಲ್ಲಿ ಹೇಳಿದರು.

ಪೆಟ್ರೋಲ್ ಅಥವಾ ಡೀಸೆಲ್ ಅನ್ನು ಸರಕು ಮತ್ತು ಸೇವಾ ತೆರಿಗೆ (ಜಿಎಸ್ಟಿ) ಆಡಳಿತದಡಿಯಲ್ಲಿ ತರಲಾಗಿದ್ದರೆ ರಾಜ್ಯಗಳಿಗೆ 2 ಲಕ್ಷ ಕೋಟಿ ರೂ.ಗಳ ಆದಾಯವನ್ನು ಹೇಗೆ ಮರುಪಡೆಯಲಾಗುತ್ತದೆ. ಕೇಂದ್ರ ಮತ್ತು ರಾಜ್ಯಗಳು ಒಟ್ಟಾಗಿ ಪೆಟ್ರೋಲಿಯಂ ಉತ್ಪನ್ನಗಳ ಮೇಲಿನ ತೆರಿಗೆಯಿಂದ 5 ಲಕ್ಷ ಕೋಟಿ ರೂಪಾಯಿ ಸಂಗ್ರಹಿಸುತ್ತವೆ ಎಂದು ಹೇಳಿದರು.

ಪೆಟ್ರೋಲಿಯಂ ಉತ್ಪನ್ನಗಳನ್ನು ಜಿಎಸ್‌ಟಿ ಅಡಿಯಲ್ಲಿ ತಂದರೆ, ಅವುಗಳ ಮೇಲೆ ಶೇಕಡಾ 28 ರಷ್ಟು ತೆರಿಗೆ ಸಂಗ್ರಹಿಸಲಾಗುವುದು. ಪ್ರಸ್ತುತ, ಪೆಟ್ರೋಲಿಯಂ ಉತ್ಪನ್ನಗಳ ಮೇಲೆ ಶೇಕಡಾ 60ರಷ್ಟು ತೆರಿಗೆ ಸಂಗ್ರಹಿಸಲಾಗುತ್ತಿದೆ. ಇದರಿಂದಾಗಿ 2 ಲಕ್ಷ ಕೋಟಿ ರೂಪಾಯಿಗಳಿಂದ 2.5 ಲಕ್ಷ ಕೋಟಿಗಳ ಕೊರತೆ ಕೇಂದ್ರ ಮತ್ತು ರಾಜ್ಯಗಳಿಗೆ ಉಂಟಾಗುತ್ತದೆ ಎಂದರು.

ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದ ಸರ್ಕಾರಕ್ಕೆ ಮಾತ್ರ ದೇಶದಲ್ಲಿ ಜಿಎಸ್ಟಿ ಆಡಳಿತವನ್ನು ಜಾರಿಗೆ ತರುವ ಧೈರ್ಯವಿದೆ ಎಂದು ಅವರು ಒತ್ತಿ ಹೇಳಿದರು.


Spread the love

About Laxminews 24x7

Check Also

ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

Spread the love ಬೆನಕಟ್ಟಿ: ಗ್ರಾಮಕ್ಕೆ ಆಗಮಿಸಿದ ಮಾಜಿ ಕೇಂದ್ರ ಸಚಿವ ದಿ. ಸುರೇಶ ಅಂಗಡಿ ಪುತ್ರಿ ಶ್ರದ್ಧಾ ಶೆಟ್ಟರ್ ಬಿಜೆಪಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ