Breaking News

ನನಗಿರುವುದು ಒಬ್ಬಳೆ ಹೆಂಡ್ತಿ, ಒಂದೇ ಸಂಸಾರ’ : ಸಚಿವ ಸುಧಾಕರ್ ಗೆ ಡಿ.ಕೆ. ಶಿವಕುಮಾರ್ ತಿರುಗೇಟು

Spread the love

ಬೆಂಗಳೂರು : ರಾಜ್ಯದ 224 ಶಾಸಕರದ್ದೂ ತನಿಖೆಯಾಗಲಿ ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂದು ಗೊತ್ತಾಗಲಿದೆ ಎಂದು ಸಚಿವ ಸುಧಾಕರ್ ಹೇಳಿಕೆಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್, ಸಚಿವ ಸುಧಾಕರ್ ನುಡಿಮುತ್ತುಗಳನ್ನು ಇಡೀ ರಾಜ್ಯಕ್ಕೆ ಕೊಟ್ಟಿದ್ದಾರೆ. ಇವರ ಹೇಳಿಕೆ ಹೇಳಿಕೆಯನ್ನು ಅಸೆಂಬ್ಲಿಯಲ್ಲಿ ಚರ್ಚೆ ಮಾಡಬೇಕು. ಇದು ಸಾಮೂಹಿಕ ವಿಚಾರ, ನನಗಿರುವುದು ಒಬ್ಬ ಹೆಂಡತಿ, ನಂದು ಒಂದೇ ಸಂಸಾರ ಎಂದು ಹೇಳಿದ್ದಾರೆ.

ಯಾವ್ಯಾವ ಮುಖ್ಯಮಂತ್ರಿಗಳು ಅಧಿಕಾರದಲ್ಲಿದ್ದಾಗ ಏನು ಮಾಡಿದ್ದರು ಎಲ್ಲವೂ ತನಿಖೆ ಆಗಲಿ ಎಂದು ಸಲಹೆ ನೀಡಿದ್ದಾರೆ. ಯಾರಿಗೆಲ್ಲಾ ಅನೈತಿಕ ಸಂಬಂಧ ಇದೆ ಎಂಬುದು ತಿಳಿಯಲಿ. ಎಲ್ಲಾ ಮಂತ್ರಿಗಳದ್ದು, ವಿರೋಧ ಪಕ್ಷಗಳವರದ್ದು ತನಿಖೆ ಅಗಲಿ. ಎಲ್ಲಾ 225 ಶಾಸಕರದ್ದೂ ತನಿಖೆ ಆಗಿ ಹೋಗಲಿ. ಯಾರು ಎಂಥವರು ಎಂಬ ಸತ್ಯ ಜನರಿಗೆ ಗೊತ್ತಾಗಲಿ ಎಂದು ಸುಧಾಕರ್ ಹೇಳಿದ್ದಾರೆ.


Spread the love

About Laxminews 24x7

Check Also

ಹುಬ್ಬಳ್ಳಿ, ಬೆಳಗಾವಿ ವಿಮಾನ ನಿಲ್ದಾಣವನ್ನೂ ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿ: ಎಂ.ಬಿ ಪಾಟೀಲ್

Spread the loveಬೆಂಗಳೂರು: ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣವನ್ನು ಅಂತಾರಾಷ್ಟ್ರೀಯ ನಿಲ್ದಾಣವಾಗಿ ಘೋಷಿಸಿರುವ ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರವು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ