Breaking News

ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅಮಾನತು

Spread the love

ಬೆಳಗಾವಿ – ಆಸ್ತಿ ನೊಂದಣಿ ವೇಳೆ ದರವನ್ನು ಅಪಮೌಲ್ಯಗೊಳಿಸಿ ನೊಂದಣಿ ಮಾಡಲಾಗಿದೆ. ಇದರಿಂದ ಸರಕಾರಕ್ಕೆ 12.99 ಕೋಟಿ ರೂ ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ ಬೆಳಗಾವಿ ಸಬ್ ರಜಿಸ್ಟ್ರಾರ್ ವಿಷ್ಣುತೀರ್ಥ ಅವರನ್ನು ಅಮಾನತುಗೊಳಿಸಲಾಗಿದೆ.

2015-18 ಅವಧಿಯಲ್ಲಿ ಒಟ್ಟೂ 9 ದಸ್ತಾವೇಜುಗಳಿಂದ 1299.12 ಲಕ್ಷ ರೂ. ನಷ್ಟವಾಗಿದೆ ಎಂದು ಆರೋಪಿಸಲಾಗಿದೆ. ಮುದ್ರಾಂಕ ಶುಲ್ಕ 12,78,79,056 ಹಾಗೂ ನೊಂದಣಿ ಶುಲ್ಕ 12,91,707 ರೂ. ಕಡಿಮೆ ಆಕರಿಸಲಾಗಿತ್ತು. ಈ ಬಗ್ಗೆ ವಿಷ್ಣುತೀರ್ಥ ಅವರಿಗೆ ನೋಟೀಸ್ ಜಾರಿಗೊಳಿಸಲಾಗಿತ್ತು.

2015-16ರಲ್ಲಿ ಬೆಳಗಾವಿ ನಗರದಲ್ಲಿ ಕೃಷಿ ಜಮೀನಿನ ಮೌಲ್ಯ 26.84 ಲಕ್ಷ ರೂ. ಇತ್ತು. ವಾಣಿಜ್ಯ ಉದ್ದೇಶಕ್ಕಾಗಿ ಇದನ್ನು ಶೇ.75ರಷ್ಟು ಹೆಚ್ಚಿಸಿ 46.97 ಲಕ್ಷ ರೂ. ಮಾಡಿ 12,58,80,000 ರೂ. ಆಗುತ್ತದೆ. ಆದಾಗ್ಯೂ 77 ಕೋಟಿ ರೂ.ಗಳಿಗೆ ನೊಂದಣಿ ಮಾಡಲಾಗಿದೆ. ಎಲ್ಲವನ್ನೂ ನಿಯಮಾವಳಿ ಪ್ರಕಾರವೇ ಮಾಡಲಾಗಿದೆ ಎಂದು ವಿಷ್ಣುತೀರ್ಥ ಸಮಜಾಯಿಸಿ ನೀಡಿದ್ದರು.

ಆದರೆ ಇದನ್ನು ಒಪ್ಪಲು ಸಾಧ್ಯವಿಲ್ಲ. ಈ ದಸ್ತಾವೇಜಿನಿಂದ ಸರಕಾರಕ್ಕೆ 12.99 ಕೋಟಿ ರೂ. ರಾಜಸ್ವ ನಷ್ಟವಾಗಿದೆ ಎಂದು ಆರೋಪಿಸಿ , ವಿಚಾರಣೆಯನ್ನು ಕಾಯ್ದಿಟ್ಟು ಅವರನ್ನು ಅಮಾನತು ಮಾಡಲಾಗಿದೆ.

ಎಲ್ಲವನ್ನೂ ನಿಯಮಾವಳಿ ಪ್ರಕಾರವೇ ಮಾಡಲಾಗಿದೆ. ಇದರಲ್ಲಿ ಸ್ವಲ್ಪವೂ ನಿಯಮಾವಳಿ ಉಲ್ಲಂಘನೆಯಾಗಿಲ್ಲ. ಆದರೆ ಸ್ಥಳ ಪರಿಶೀಲಿಸದೆ ಅಮಾನತು ಆದೇಶ ಹೊರಡಿಸಲಾಗಿದೆ


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ