Breaking News

ಬೈಕ್ ಡಿಕ್ಕಿ – ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವು

Spread the love

ಕೋಲಾರ: ಎರಡು ಬೈಕ್‍ಗಳ ನಡುವೆ ನಡೆದ ಅಪಘಾತದಲ್ಲಿ ಕರ್ತವ್ಯಕ್ಕೆ ತೆರಳುತ್ತಿದ್ದ ಎಎಸ್‍ಐ ಸಾವನ್ನಪ್ಪಿರುವ ಘಟನೆ ಕೋಲಾರದಲ್ಲಿ ನಡೆದಿದೆ.

ಶ್ರೀನಿವಾಸಪುರ ಪೊಲೀಸ್ ಠಾಣೆಯ ಎಎಸ್‍ಐ ಮಂಜುನಾಥ್ (52) ಮೃತಪಟ್ಟವರು. ಜಿಲ್ಲೆಯ ಶ್ರೀನಿವಾಸಪುರ ತಾಲೂಕು ಶಿವಪುರ ಗ್ರಾಮದ ಬಳಿ ಕಳೆದ ರಾತ್ರಿ ಈ ಘಟನೆ ನಡೆದಿದ್ದು, ಕರ್ತವ್ಯಕ್ಕೆ ತೆರಳುವ ವೇಳೆ ಎದುರಿಗೆ ಬಂದ ಬೈಕ್ ಡಿಕ್ಕಿಯಾಗಿ ಸ್ಥಳದಲ್ಲೇ ಎಎಸ್‍ಐ ಸಾವನ್ನಪ್ಪಿದ್ದಾರೆ.ಬುಧವಾರ ರಾತ್ರಿ ಕೋಲಾರದಿಂದ ಶ್ರೀನಿವಾಸಪುರಕ್ಕೆ ಕರ್ತವ್ಯಕ್ಕೆ ತೆರಳುವ ಮಾರ್ಗ ಮಧ್ಯೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಕೋಲಾರ ಎಸ್ಪಿ ಕಾರ್ತಿಕ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಶ್ರೀನಿವಾಸಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಕೋಲಾರ | ವ್ಹೀಲಿಂಗ್‌ ಮಾಡ್ತಿದ್ದ ಐವರು ಪುಂಡರು ಅರೆಸ್ಟ್‌

Spread the loveಕೋಲಾರ: ಬೈಕ್‌ ವ್ಹೀಲಿಂಗ್‌ ಮಾಡ್ತಿದ್ದ ಐವರನ್ನು ಮಾಲೂರು (Maluru) ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಬೆಂಗಳೂರು ಮೂಲದ ಸೈಯದ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ