Breaking News

ರಾಜ್ಯ ಬಿಜೆಪಿಯಲ್ಲಿ ಭಾರೀ ಬದಲಾವಣೆ, ವರಿಷ್ಠರಿಂದ ಮಹತ್ವದ ಕ್ರಮ

Spread the love

ಬೆಂಗಳೂರು: ರಾಜ್ಯ ಬಿಜೆಪಿ ಕೋರ್ ಕಮಿಟಿಯನ್ನು ಪುನಾರಚನೆ ಮಾಡಲಾಗಿದೆ. ಬಿಜೆಪಿ ಕೋರ್ ಕಮಿಟಿಗೆ ಉಪಮುಖ್ಯಮಂತ್ರಿಗಳಾದ ಡಾ.ಸಿ.ಎನ್. ಅಶ್ವತ್ಥನಾರಾಯಣ, ಲಕ್ಷ್ಮಣ ಸವದಿ, ಸಚಿವ ಬಿ. ಶ್ರೀರಾಮುಲು, ರಾಜ್ಯ ಬಿಜೆಪಿ ಉಪಾಧ್ಯಕ್ಷ ನಿರ್ಮಲ ಕುಮಾರ್ ಸುರಾನಾ ಸೇರ್ಪಡೆಯಾಗಿದ್ದಾರೆ.

ಕೋರ್ ಕಮಿಟಿಯ ಸದಸ್ಯರಾಗಿದ್ದ ಸಿ.ಟಿ. ರವಿ ವಿಶೇಷ ಆಹ್ವಾನಿತರಾಗಿದ್ದಾರೆ. 13 ಸದಸ್ಯರು, ಮೂವರು ವಿಶೇಷ ಆಹ್ವಾನಿತರ ಕಮಿಟಿಯನ್ನು ಪುನರ್ ರಚನೆ ಮಾಡಲಾಗಿದೆ. ಸಚಿವ ಅರವಿಂದ ಲಿಂಬಾವಳಿ ಮತ್ತು ಸಿ.ಎಂ. ಉದಾಸಿ ಅವರಿಗೆ ಕೊಕ್ ನೀಡಲಾಗಿದೆ.

ಕೋರ್ ಕಮಿಟಿಯಲ್ಲಿ ನಳಿನ್ ಕುಮಾರ್ ಕಟೀಲು, ಬಿ.ಎಸ್. ಯಡಿಯೂರಪ್ಪ, ಪ್ರಹ್ಲಾದ್ ಜೋಶಿ, ಡಿ.ವಿ. ಸದಾನಂದಗೌಡ, ಜಗದೀಶ್ ಶೆಟ್ಟರ್, ಕೆ.ಎಸ್. ಈಶ್ವರಪ್ಪ, ಗೋವಿಂದ ಕಾರಜೋಳ, ಸಿ.ಎನ್. ಅಶ್ವತ್ಥ ನಾರಾಯಣ, ಲಕ್ಷ್ಮಣ ಸವದಿ, ಆರ್. ಅಶೋಕ್, ಬಿ. ಶ್ರೀರಾಮುಲು, ನಿರ್ಮಲ್ ಕುಮಾರ್ ಸುರಾನಾ, ಬಿ.ಪಿ. ಅರುಣ್ ಕುಮಾರ್ ಅವರಿದ್ದಾರೆ. ವಿಶೇಷ ಆಹ್ವಾನಿತರಾಗಿ ಅರುಣ್ ಸಿಂಗ್, ಡಿ.ಕೆ. ಅರುಣಾ ಮತ್ತು ಸಿ.ಟಿ. ರವಿ ಅವರನ್ನು ನೇಮಕ ಮಾಡಲಾಗಿದೆ.


Spread the love

About Laxminews 24x7

Check Also

ಸಿಲಿಂಡರ್ ದರ ಹೆಚ್ಚಳಕ್ಕೆ ಕಾಂಗ್ರೆಸ್ ಆಕ್ರೋಶ – ಖಾಲಿ ಸಿಲಿಂಡರ್ ಹಿಡಿದು ಪ್ರತಿಭಟನೆ

Spread the loveಬೆಂಗಳೂರು: ಸಿಲಿಂಡರ್ ದರ ಹೆಚ್ಚಳಕ್ಕೆ  ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದ್ದು, ಕೆಪಿಸಿಸಿ ಕಚೇರಿ ಮುಂದೆ ಕೇಂದ್ರ ಸರ್ಕಾರದ ವಿರುದ್ಧ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ