ಬೆಳಗಾವಿ: ಬೆಳಗಾವಿ ಲೋಕಸಭಾ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿ ಘೋಷಣೆ ಬೆನ್ನಲ್ಲೇ ಕೈ ನಾಯಕರ ಚುನಾವಣಾ ಸಿದ್ಧತೆ ಜೋರಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಮಾರ್ಚ್ 29ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಬೆಳಗಾವಿ ಉಪಚುನಾವಣಾ ಅಖಾಡ ರಂಗೇರುತ್ತಿದ್ದು, ಭಾನುವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕುಂದಾನಗರಿ ಬೆಳಗಾವಿಗೆ ಆಗಮಿಸಲಿದ್ದಾರೆ. ಮರುದಿನ, ಸೋಮವಾರ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಸಲಿದ್ದಾರೆ.
ಡಿ.ಕೆ.ಶಿವಕುಮಾರ್ ಮಾರ್ಚ್ 28ರಿಂದ ಉತ್ತರ ಕರ್ನಾಟ ಭಾಗದಲ್ಲಿ ಹುಬ್ಬಳ್ಳಿ-ಧಾರವಾಡ, ಬೆಳಗಾವಿ, ರಾಯಚೂರು ಹಾಗೂ ಕಲಬುರ್ಗಿ ಜಿಲ್ಲೆಗಳಿಗೆ ಭೇಟಿ ನೀಡಲಿದ್ದಾರೆ.
ಸತೀಶ್ ಜಾರಕಿಹೊಳಿ ನಾಮಪತ್ರ ಸಲ್ಲಿಕೆ ವೇಳೆ ಕಾಂಗ್ರೆಸ್ ಪಕ್ಷದ ಹಲವಾರು ಮುಖಂಡರು ಭಾಗವಹಿಸುವ ಸಾಧ್ಯತೆ ಇದೆ.
Laxmi News 24×7